Headlines

ಇರಾನ್‌ಗೆ ಟ್ರಂಪ್ ಮತ್ತೊಮ್ಮೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, “ಪರಿಸ್ಥಿತಿ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸಬೇಕು” ಎಂದರು. ಇರಾನ್ ಮಾತುಕತೆಗೆ ಮುಂದಾಗದಿದ್ದರೆ ವಿದ್ಯುತ್ ಸ್ಥಾವರಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದರು. ಸೇನಾ ಕಾರ್ಯಾಚರಣೆ ತಾವು ನಿರ್ಧರಿಸುವವರೆಗೆ ಮುಂದುವರಿಯಲಿದೆ…

Read More

ಮಂಗಳೂರು: ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಪುನೀತ್ ಕೆರೆಹಳ್ಳಿ

ಮಂಗಳೂರು: ಬೆಂಗಳೂರಿನ ಲಾರಿಪಾಳ್ಯದಲ್ಲಿ ಗೋ ರಕ್ಷಣೆ ವೇಳೆ ನೀಡಿದ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಅವರು ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ 19 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾಗಿರುವ ವಿಚಾರವನ್ನು ಉಲ್ಲೇಖಿಸಿ, ಅಕ್ರಮ ವಲಸಿಗರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಸಮರ್ಪಕ ಕ್ರಮ ಕೈಗೊಳ್ಳದಿದ್ದರೆ, ಬೆಂಗಳೂರಿನಲ್ಲಿ ನಡೆಸಿದ ರೀತಿಯ ಕಾರ್ಯಾಚರಣೆಯನ್ನು ಮಂಗಳೂರಿನಲ್ಲಿಯೂ ನಡೆಸುವುದಾಗಿ ಅವರು ಹೇಳಿದರು….

Read More

ಕೋಲಾರದ ಗಡಿನಾಡು ಕನ್ನಡಿಗ ಬಿ. ಶಿವಕುಮಾರ್ ಅವರಿಂದ ಜು.26ರಂದು ಕನ್ನಡ ಮೆರವಣಿಗೆಗೆ ಚಾಲನೆ….!

ಕಾಸರಗೋಡು: ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಜುಲೈ 26ರಂದು ನಡೆಯಲಿರುವ ಭವ್ಯ ಕನ್ನಡ ಮೆರವಣಿಗೆಯನ್ನು ಕೋಲಾರದ ಖ್ಯಾತ ಕನ್ನಡಪರ ಹೋರಾಟಗಾರ, ಶರಣ ಸಾಹಿತ್ಯ ಪರಿಷತ್ ಕೋಲಾರ ತಾಲ್ಲೂಕು ಅಧ್ಯಕ್ಷ ಹಾಗೂ ಸ್ವರ್ಣಭೂಮಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಬಿ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕನ್ನಡ ಭವನ ಗ್ರಂಥಾಲಯದ ರಜತ ಸಂಭ್ರಮ ಸಮಾರೋಪ ಪ್ರಯುಕ್ತ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಆಯೋಜಿಸಲಾಗಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್…

Read More

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ……!

ಜುಲೈ 26 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026”ರ ಅಂಗವಾಗಿ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ಎಡನೀರು ಶ್ರೀಗಳು ಬ್ಯಾನರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಎಡನೀರು ಶ್ರೀಗಳು, “ಬೌಗೋಳಿಕವಾಗಿ ಕೇರಳದಲ್ಲಿದ್ದರೂ ನಮ್ಮ ಬದುಕು, ಸಂಸ್ಕೃತಿ…

Read More

ಸರಕಾರವು ಕರಾವಳಿಯಲ್ಲಿ ಪಡಿತರ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸಲು ಒತ್ತಾಯಿಸಿ ಪಡಿತರ ಅಂಗಡಿಗಳ ಮುಂದೆ ಉಚಿತವಾಗಿ ಅಕ್ಕಿ ವಿತರಿಸಿ ಪ್ರತಿಭಟಿಸಿದ SDPI

ಬೆಳ್ತಂಗಡಿ : ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ ”ಕರಾವಳಿಯ ತಟ್ಟೆಗೆ ಕುಚ್ಚಲು ನೀಡಿ” “ನಮ್ಮ ಆಹಾರ ನಮ್ಮ ಹಕ್ಕು” ಎಂಬ ಘೋಷನೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಕರೆ ನೀಡಿದ ಸಾಂಕೇತಿಕ ಪ್ರತಿಭಟನೆ ಅಂಗವಾಗಿ ಬೆಳ್ತಂಗಡಿ, ಬಂಟ್ವಾಳ,ಸುಳ್ಯ,ಕಡಬ ತಾಲೂಕು ವ್ಯಾಪ್ತಿಯ ಆಯ್ದ ಪಡಿತರ ಅಂಗಡಿಗಳ ಮುಂದೆ…

Read More

ಪೊಲೀಸ್ ಠಾಣೆಯ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ

ಮಂಗಳೂರು, ಜು.16: ಮುಲ್ಕಿ ಪೊಲೀಸ್ ಠಾಣೆಯೊಳಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಬೆದರಿಕೆ ಒಡ್ಡಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವ ಘಟನೆ ನಡೆದಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಜಾರಿಯೋ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 12ರಂದು ತಾಳಿಪಾಡಿ ಗ್ರಾಮದ ದಾಮಸ್ಕಟ್ಟೆಯ ಗುಡ್ಡು ಪಂಡಿತ್ ಪ್ರದೇಶದಲ್ಲಿ ಸುಮಾ ಎಂಬವರ ಮನೆಗೆ ಕೆಲವರು ನುಗ್ಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಘಟನೆಯ ಬಳಿಕ 112ಕ್ಕೆ…

Read More

ರಾಮಮಂದಿರ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧ: ಕಾಂಗ್ರೆಸ್ ಆರೋಪ

ಮಂಗಳೂರು : ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಸುಧೀರ್ ಕುಮಾರ್ ಮರೋಳಿ ಆಪಾದಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟ್ರಸ್ಟ್ ನಲ್ಲಿದ್ದವರೆಲ್ಲರೂ ಆರ್ ಎಸ್ ಎಸ್ ಮತ್ತು ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು. ಈ ತಂಡ ದೇವರ ಹಣ, ಬಂಗಾರ, ಬೆಳ್ಳಿ, ನಗದನ್ನು ಢಕಾಯಿತಿ ಮಾಡಿದೆ. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಪ್ರಧಾನಿ ನರೇಂದ್ರ ಮೋದಿಯವರನ್ನು ದೇವರಿಗೆ ಹೋಲಿಸಿದ್ದರು. ಉತ್ತರ ಪ್ರದೇಶ ಸರಕಾರ ರಚಿಸಿರುವ…

Read More

ರಾಮಮಂದಿರ ಹುಂಡಿ ಕಳವು: ಕೋಟ್ಯಂತರ ಭಕ್ತರ ನಂಬಿಕೆಗೆ ಬಿಜೆಪಿ-ಆರ್‌ಎಸ್‌ಎಸ್‌ ಆಘಾತ — ವಿನಯ್ ಕುಮಾರ್ ಸೊರಕೆ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು…

Read More

ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಜಾಗತಿಕ ಸಮುದಾಯಕ್ಕೆ ಮನವಿ

ಮಂಗಳೂರು: ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಟಿಬೆಟಿಯನ್ ಸಂಸ್ಕೃತಿಯ ಉಳಿವಿಗಾಗಿ ವಿಶ್ವಸಂಸ್ಥೆ, ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟಿಬೆಟಿಯನ್ ಸಮುದಾಯದ ಪ್ರತಿನಿಧಿ ಡೆನ್ಜಿನ್ ದಾತೋನ್ (Denzin Dataon) ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಬೆಟಿಯನ್ ಜನರು ಹಲವು ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸುತ್ತಿದ್ದು, ಅವರ ಧ್ವನಿಯನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಸ್ವಯಂ-ಆಹುತಿ ನೀಡಿದ ಟಿಬೆಟಿಯನ್ ಹುತಾತ್ಮರ ತ್ಯಾಗವನ್ನು…

Read More

ಕೊಪ್ಪಳದ ಸಾಹಿತಿ ದಂಪತಿಗಳಾದ ಮಹೇಶ್ ಮನ್ನಾಪುರ–ಅನ್ನಪೂರ್ಣರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು, ಜು.15: ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮಹೇಶ್ ಮನ್ನಾಪುರ ದಂಪತಿಗಳಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ…

Read More
error: Content is protected !!