ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ – ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಗಾಂಜಾ ಖದೀಮರು
ಮಂಗಳೂರು ಅಗಸ್ಟ್ 1 : ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೇರಳ ರಾಜ್ಯದ ನಿವಾಸಿಗಳಾದ ಮಸೂದ್ ಎಂಕೆ (45), ಮೊಹಮ್ಮದ್ ಆಶಿಕ್ (24), ಸುಬೇರ್ (30) ಎಂದು ಗುರುತಿಸಲಾಗಿದೆ.ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ…