ರಾಮ ಮಂದಿರ ಕಾಣಿಕೆ ಹಗರಣದ ಸಮಗ್ರ ತನಿಖೆಗೆ ಆಗ್ರಹ: ವಿನಯ್ ಕುಮಾರ್ ಸೊರಕೆ
ಮಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ಕಾಣಿಕೆ ಕಳ್ಳತನ ಪ್ರಕರಣವು ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ನಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದ್ದು, ಭಕ್ತರು ಸಮರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ಕಾಣಿಕೆಗಳ ದುರುಪಯೋಗ ನಡೆದಿದೆ ಎಂಬ…
