ತ್ರಿಸ್ತರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಸಜ್ಜಾಗಲು ಬ್ಲಾಕ್ ಕಾಂಗ್ರೇಸ್ ಜೊತೆ ಪಂಚಾಯತ್ ರಾಜ್ ಸಂಘಟನೆ ಕೈಜೋಡಿಸಲಿದೆ- ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ
ಬೆಳ್ತಂಗಡಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ಅವರ ನೇತೃತ್ವದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಯ ಚುನಾವಣೆಗಳ ತಯಾರಿಯ ಕುರಿತು ಗಂಭೀರ ಚರ್ಚೆ ನಡೆಯಿತು.ಸಭೆಯಲ್ಲಿ ಗ್ರಾ.ಪಂಚಾಯತ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು…
