ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವಾಗ ಸ್ಟೌವ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತ್ಯು
ಮಂಜೇಶ್ವರ: ಬಂಗ್ರ ಮಂಜೇಶ್ವರ ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿ ಮಾಡುವ ವೇಳೆ ಸ್ಟವ್ ನಿಂದ ಬೆಂಕಿ ತಗುಲಿ ಗಂಭೀರ ಸುಟ್ಟು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಡುಗೆಯಾಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.ಬಂಗ್ರ ಮಂಜೇಶ್ವರ ಸರಕಾರಿ ಹೈಸ್ಕೂಲಿನ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ನಿನ್ನೆ ರಾತ್ರಿ ನಿಧನರಾದರು. ಕಳೆದ ಡಿಸೆಂಬರ್ 16 ರಂದು ಇವರು ಬೆಂಕಿ…
