ಬಾಂಗ್ಲಾದಲ್ಲಿ ಹಿಂದೂಗಳಿಗೆ ಅಗತ್ಯ ರಕ್ಷಣೆ ಆಗಬೇಕು- ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ
ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪಿಎಚ್‌ಪಿ, ಬಜರಂಗದಳದ ಕಾರ್ಯಕರ್ತರು ಸಾಗಿಬಂದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದೀಪುಚಂದ್ರದಾಸ್ ಎಂಬ ಯುವಕ ನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ನಿಲ್ಲಬೇಕು. ಈ…
