ಉಳಿಯತ್ತಡ್ಕ: 24ನೇ ವರ್ಷದ ವೈದಿಕ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಸಂಪನ್ನ
ಉಳಿಯತ್ತಡ್ಕ: ಗುರುಕೃಪಾ ವೈದಿಕ ಶಿಕ್ಷಣ ಸಮಿತಿ ಉಳಿಯತ್ತಡ್ಕ ಇದರ ವತಿಯಿಂದ ವಿಶ್ವಬ್ರಾಹ್ಮಣ ಸಮಾಜದ ಮಕ್ಕಳಿಗೆ ವೈದಿಕ ಧಾರ್ಮಿಕ ಸಂಸ್ಕಾರವನ್ನು ಒದಗಿಸುವ 24 ನೇ ವರ್ಷದ “ವೈದಿಕ ಶಿಕ್ಷಣ ಶಿಬಿರ”ವು ಇಲ್ಲಿನ ಗುರುಕೃಪಾ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬ್ರಹ್ಮ ಶ್ರೀ ಪುರೋಹಿತರತ್ನ ಬಿ. ಕೇಶವ ಆಚಾರ್ಯ ಅವರು, “ನಿತ್ಯ ನೈಮಿತ್ತಿಕ ಕರ್ಮಾನುಷ್ಠಾನವನ್ನು ಬಾಲ್ಯದಲ್ಲಿಯೇ ಅಳವಡಿಸಿಕೊಂಡಿದ್ದಲ್ಲಿ ಸಮಾಜವು ಬಲಿಷ್ಟವಾಗಿ ಬೆಳೆಯುವುದು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ…
