ಗಡಿನಾಡಿನ ಸಾಹಿತ್ಯ-ಸಾಂಸ್ಕೃತಿಕ ಕಣ್ಮಣಿ ಫಾದರ್ ಬಾಸಿಲ್ ವಾಸ್ ಅವರಿಗೆ ಭಾವುಕ ವಿದಾಯ
ಕಾಸರಗೋಡು: ಗಡಿನಾಡ ಕಾಸರಗೋಡಿನ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ ನೀಡುತ್ತಾ, ಅಂತರಧರ್ಮೀಯ ಸೌಹಾರ್ದದ ಪ್ರತೀಕವಾಗಿ ಗುರುತಿಸಿಕೊಂಡಿದ್ದ ವರ್ಕಾಡಿ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಚರ್ಚ್ನ ಧರ್ಮಗುರು ಅತೀ ವಂದನೀಯ ಫಾದರ್ ಬಾಸಿಲ್ ವಾಸ್ ಅವರು ಇದೀಗ ಹೊಸ ಜವಾಬ್ದಾರಿಯೊಂದಿಗೆ ಮಂಗಳೂರಿನ ಬೊಂದೆಲ್ ಚರ್ಚ್ಗೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕನ್ನಡ ಕಾರ್ಯನಿರತ ಪತ್ರಕರ್ತರ ಶ್ರೇಯೋಭಿವೃದ್ಧಿ ಸಂಘ ಮತ್ತು ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಕನ್ನಡ ಪತ್ರಕರ್ತರ ಸಂಘದ…
