ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಶಾಸಕ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ
ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾಗಿರುವ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸ್ಥಳೀಯ ಸಂಸ್ಕೃತಿಯ ಉತ್ತೇಜನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಇತ್ತೀಚೆಗೆ ಜ.10ರಂದು ನಡೆದ ಕರಾವಳಿ ಪ್ರವಾಸೋದ್ಯಮ…