ಡಿ.12ಕ್ಕೆ ತೆರೆ ಮೇಲೆ ಘರ್ಜಿಸಲು ಬರುತ್ತಿದೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ… !
ಮಂಗಳೂರು:ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರು…
