Headlines

ಅಮೃತ ಪ್ರಕಾಶ ಪತ್ರಿಕೆ 45ನೇ ಸರಣಿ ಕೃತಿ ಬಿಡುಗಡೆ

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರ ಕಥಾ ಪುಸ್ತಕ ಕನ್ನಡ, ಇಂಗ್ಲೀಷ್, ಅರೆಭಾಷೆ ಮತ್ತು ತಮಿಳು…

Read More

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ: ಕೊಲೆ ಆರೋಪಿ ವಿರುದ್ಧ ದಾಖಲಾಯ್ತು ಕೇಸ್ .

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ, ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂದಹಾಗೇ ಈ ಘಟನೆ ಅ.22ರಂದು ನಡೆದಿದ್ದು,…

Read More

ಕೇಸ್ ಇದ್ದವರ ಜತೆ ತಿರುಗಾಡಿದ್ರೆ ನಿಮಗೆ ತೊಂದರೆ: ಮಂಗಳೂರು ಪೊಲೀಸ್‌ ಕಮಿಷನ‌ರ್ ಸುಧೀರ್ ರೆಡ್ಡಿಯವರಿಂದ ಎಚ್ಚರಿಕೆ……!

ಮಂಗಳೂರು: ಈಗಾಗಲೇ ಪ್ರಕರಣದಲ್ಲಿ ಭಾಗಿಯಾದವರ ಜತೆ ಯಾವುದೇ ಪ್ರಕರಣ ಇಲ್ಲದವರು ತಿರುಗಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ. ಸರಿಯಾಗಿ ಕೇಳಿಸಿದಂತೆ ಕಾಣುತ್ತಿಲ್ಲ. ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ. ಇಲ್ಲ ನಾವು ತಿರುಗುತ್ತೇವೆ. ನಮ್ಮ ಇಷ್ಟ ಎಂದು ನೀವು ಬಯಸಿದರೆ ನಮಗೆ ಸಮಸ್ಯೆ ಇಲ್ಲ. ನೀವು ಮಾಡುವುದು ನೀವು ಮಾಡಿ, ನಾವು ಮಾಡುವುದು ನಾವು ಮಾಡುತ್ತೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Read More

ಬಡ ರೈತರ ಕೃಷಿ ಭೂಮಿಯ ಅಕ್ರಮ ಸ್ವಾಧೀನದ ವಿರುದ್ಧ ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನೆ .

ಬಡ ಗೇಣಿದಾರರ ಭೂಮಿಯನ್ನು ಮಾಲೀಕರಿಂದ ನೇರವಾಗಿ ಖರೀದಿ ಮಾಡಿ ಗೇಣಿದಾರರಿಗಾದ ಅನ್ಯಾಯದ ವಿರುದ್ಧ, ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿರುವುದರ ವಿರುದ್ಧ ಹಾಗೂ ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ ರಸ್ತೆಯ ಅತಿಕ್ರಮಣದ ವಿರುದ್ಧ ಅಂಬ್ಲಮೊಗರು ಗ್ರಾಮದ ನಾಗರೀಕರು ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಇಂದು ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಅಂಬ್ಲಮೊಗರು ಮುನ್ನೂರು ಬೆಳ್ಮ ಗ್ರಾಮದ ನಾಗರಿಕರು ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ಬೇಜವಾಬ್ದಾರಿ ವರ್ತನೆಯನ್ನು ಘೋಷಣೆಗಳನ್ನು ಕೂಗುವ ಮೂಲಕ…

Read More

ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ .

ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು…

Read More

ಸುರತ್ಕಲ್ ಚೂರಿ ಇರಿತ ಪ್ರಕರಣ.ನಾಲ್ವರು ಆರೋಪಿಗಳ ಗುರುತು ಪತ್ತೆ .

ಸುರತ್ಕಲ್: ದೀಪಕ್ ಬಾರ್ ಬಳಿ ಗುರುವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸಂಘ ಪರಿವಾರದ ಕಾರ್ಯಕರ್ತ ಗುರುರಾಜ್, ಆತನ ಸ್ನೇಹಿತರಾದ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ದುಷ್ಕೃತ್ಯ ಎಸಗಿದ ಆರೋಪಿಗಳೆಂದು ತಿಳಿದು ಬಂದಿದೆ. ಪ್ರಕರಣದ ತನಿಖೆ ಆರಂಭಿಸಿದ ಸುರತ್ಕಲ್ ಪೊಲೀಸ್ ನಿರೀಕ್ಷ ಪ್ರಮೋದ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಘಟನೆ ನಡೆಯುವ ಸಂದರ್ಭ ಸ್ಥಳದಲ್ಲಿದ್ದ ಸಂತ್ರಸ್ತರ ಸ್ನೇಹಿತನೊಬ್ಬನ…

Read More

ಕರ್ನೂಲ್ ಬಸ್ ದುರಂತ .ಮೃತರ ಸಂಖ್ಯೆ 20ಕ್ಕೆ ಏರಿಕೆ .

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ನಡೆದಿದೆ. ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್‌ ಬೆಂಕಿಗಾಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಇಡೀ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇವರಲ್ಲಿ 18 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಹಲವರ ಮೃತದೇಹ ಸಂಪೂರ್ಣವಾಗಿ…

Read More

ನವಂಬರ್ 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು…

Read More

ಹೂವಿನ ರಾಶಿಯೋ.. ಜಾರುವ ಪಾದಚಾರಿ ರಸ್ತೆಯೋ….

ಮಂಗಳೂರು: ನಗರದ ಹೃದಯ ಭಾಗವೆಂದು ಕರೆಯಲ್ಪಡುವ ಹಂಪನ ಕಟ್ಟೆಯ ಮಿನಿ ವಿಧಾನಸೌಧ ಎದುರು ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರ ಜೋರಾಗಿಯೇ ಇತ್ತು. ಘಟ್ಟ ಪ್ರದೇಶದಿಂದ ಕರಾವಳಿಯ ಕಡೆಗೆ ಹೂವಿನ ರಾಶಿಯೇ ಹರಿದು ಬಂದಿತ್ತು. ಸೇವಂತಿಕೆ, ಗೊಂಡೆ ಹೂವುಗಳ ರಾಶಿಯು ಕಣ್ಣಿಗೆ ಹಬ್ಬವಾಗಿತ್ತು. ಆದರೆ ಇದೀಗ ದೀಪಾವಳಿ ಹಬ್ಬ ಮುಗಿಯುತ್ತಿದಂತೆಯೇ ತಂದ ಹೂವುಗಳನ್ನು ಪಾದಚಾರಿ ಮಾರ್ಗದಲ್ಲೇ ಬಿಟ್ಟು ಹೋಗಿದ್ದು. ಅದು ಅಲ್ಲೇ ಚೆಲ್ಲಾಪಿಲ್ಲಿಯಾಗಿ ಉಳಿದು ಬಿಟ್ಟಿದೆ. ಸಂಜೆಯ ವೇಳೆಗೆ ಎಡೆ ಬಿಡದೆ ಸುರಿದ ಹಿಂಗಾರು ಮಳೆಯು ಹೂವಿನ…

Read More

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಶಶಿ ತರೀಕೆರೆ ನೇಮಕ…!

ಉಡುಪಿ:ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿತ್ತು. ಅದರಂತೆ ಪ್ರಶಸ್ತಿಗೆ 88…

Read More
error: Content is protected !!