Headlines

ಕೃಷ್ಣ ನಗರಿಯ ಶ್ರೀ ಕೃಷ್ಣಮಠದಲ್ಲಿ ವಿಶೇಷ ಗೋಪೂಜೆ ಸಂಭ್ರಮ …. !

ಉಡುಪಿ: ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಲಾಯಿತು. ಈ ಪ್ರಯುಕ್ತ ಕನಕ ಗೋಪುರದ ಎದುರು ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ನೀಡಿದರು. ನಂತರ ರಥಬೀದಿಯ ಸುತ್ತಲೂ ಗೋವುಗಳ ವೈಭವದ ಮೆರವಣಿಗೆ ನಡೆಯಿತು. ನಂತರ ಶ್ರೀ ಕೃಷ್ಣ ಮಠದ ಆವರಣದಲ್ಲಿ ಸಂಕಲ್ಪ ಸಹಿತ ಸಾಮೂಹಿಕ ಗೋಪೂಜೆ ಕಾರ್ಯಕ್ರಮವು ನಡೆಯಿತು. ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು

Read More

ಉಡುಪಿಯಲ್ಲಿ ಚರಂಡಿಗೆ ಎಸೆದ ಹೂವುಗಳ ಮರು ಮಾರಾಟ ಜೋರು, ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ….. !

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯಲ್ಲಿ ಭರ್ಜರಿ ಹೂ ಮಾರಾಟ ನಡೆಯುತ್ತಿದೆ. ಹೊರ ಜಿಲ್ಲೆಯ ಹಲವು ಮಾರಾಟಗಾರರು ಕಳೆದ ಮೂರು ದಿನಗಳಿಂದ ಇಲ್ಲಿ ಠಿಕಾಣಿ ಹೂಡಿ ಹೂ ಮಾರಾಟ ಮಾಡುತ್ತಿದ್ದಾರೆ. ಇದೇ ವೇಳೆ ಎಸೆದಿರುವ ಹಾಳಾದ ಹೂವನ್ನು ತಂಡವೊಂದು ಸಂಗ್ರಹಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ನಗರದ ಮಾರುಥಿ ವೀಥಿಕಾದಲ್ಲಿ ಕಂಡುಬಂದಿತು. ಸಾರ್ವಜನಿಕರಿಂದ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡು, ಹೂವು ಮಾರಾಟಗಾರರನ್ನು ತರಾಟೆ ತೆಗೆದುಕೊಂಡು ವ್ಯಾಪಾರವನ್ನು ನಿಲ್ಲಿಸಿದರು. ಮಳೆ ಬಂದ ಕಾರಣ ಹೂವು ವ್ಯಾಪಾರ ಕುಸಿತ ಕಂಡ…

Read More

ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ಹೆಲಿಪ್ಯಾಡ್‌ನಲ್ಲಿ ಸಿಲುಕಿದ ಚಕ್ರ …. !

ಶಬರಿಮಲೆ:ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನ ಚಕ್ರ ಕೇರಳದ ಪಟ್ಟಣಂತಿಟ್ಟ ಬಳಿಯ ಪ್ರಮದಂನಲ್ಲಿ ಇಳಿಯುವಾಗ ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.ಹೊಸದಾಗಿ ಸಿದ್ಧಪಡಿಸಲಾದ ಹೆಲಿಪ್ಯಾಡ್‌ನಲ್ಲಿ ಬೆಳಿಗ್ಗೆ 9.05 ರ ಸುಮಾರಿಗೆ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿಯಿತು, ಆದರೆ ರಾಷ್ಟ್ರಪತಿಗಳು ಇಳಿದ ಕೂಡಲೇ ಅದರ ಟೈರ್‌ಗಳು ಹೊಸದಾಗಿ ಹಾಕಲಾದ ಕಾಂಕ್ರೀಟ್‌ ನಲ್ಲಿ ಸಿಲುಕಿ ಹಾಕಿಕೊಂಡಿವೆ. ರಾಷ್ಟ್ರಪತಿಗಳು ಯಾವುದೇ ವಿಳಂಬವಿಲ್ಲದೆ ರಸ್ತೆ ಮೂಲಕ ಪಂಪಾಗೆ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಅಧಿಕೃತ ಮೂಲಗಳ ಪ್ರಕಾರ, ಪ್ರಮದಂ ಒಳಾಂಗಣ…

Read More

ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು .

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು…

Read More

20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.

ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ & ದೇಬಾ ದಾಸ್, ಬಂಧಿತರು. ದಿನಾಂಕ 19/20-10-2025 ರಂದು ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್…

Read More

ಮಂಜೇಶ್ವರ ಆಟೋ ನಿಲ್ದಾಣ ವಿವಾದ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ ಯು ಎಲ್ ಸಿ ಸಿ ಅಧಿಕೃತರು : ಆಟೋ ಚಾಲಕರಿಗೆ ಬೆಂಬಲವಾಗಿ ಎ ಐ ಟಿ ಯು ಸಿ : ಪ್ರತಿಭಟನೆ : ಸ್ಥಳದಲ್ಲಿ ಸಂಘರ್ಷಾವಸ್ಥೆ : ಕಾಮಗಾರಿ ತಾತ್ಕಾಲಿಕ ತಾತ್ಕಾಲಿಕ ಸ್ಥಗಿತ

ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ಸಮೀಪದ ರಾಗಂ ಜಂಕ್ಷನ್ ಸರ್ವೀಸ್ ರಸ್ತೆಯಲ್ಲಿರುವ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಆಗ್ರಹಿಸುತ್ತಿದ್ದ ಆಟೋ ಚಾಲಕರ ಮನವಿಗೆ ಸ್ಪಂದನೆ ನೀಡುವ ಬದಲು, ಜಿಲ್ಲಾಧಿಕಾರಿಯವರ ಸೂಚನೆಗೆ ವಿರುದ್ಧವಾಗಿ ಅಧಿಕಾರಿಗಳು ಕೆಲಸ ಆರಂಭಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಟೋ ಚಾಲಕರ ತಂಡವು ನಿಕಟಪೂರ್ವದಲ್ಲಿ ಮಂಜೇಶ್ವರ ತಾಲೂಕಿನ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಯು ಎಲ್ ಸಿ ಸಿ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು…

Read More

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಗೆ ಜಾತಿ ನಿಂದನೆ, ಅಶ್ಲೀಲ ಸಂದೇಶ ರವಾನೆ – ಯುವಕ ಅರೆಸ್ಟ್‌

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಪ್ರಕರಣದಲ್ಲಿ ಸೋಶಿಯಲ್ ಮಿಡಿಯಾದಲ್ಲಿ ಯುವತಿಯ ಅಶ್ಲೀಲ ಪೋಟೋ ವೈರಲ್ ಮಾಡಿದ ಯುವಕನನ್ನು ಬಂಧಿಸಲಾಗಿದೆ. ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿದ್ದ ಯವತಿಯ ಅಶ್ಲೀಲ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ಯುವಕನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾವೂರು ಆಕಾಶಭವನ ಕಾಪಿಗುಡ್ಡ ನಿವಾಸಿ ನಿಖಿಲ್ ರಾಜ್ (27) ಎಂದು ಗುರುತಿಸಲಾಗಿದೆ. ಕದ್ರಿ ಠಾಣೆಯಲ್ಲಿ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು…

Read More

ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಪುತ್ತೂರು: ಜೇನುನೊಣ ದಾಳಿ- ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿ 5 ಲಕ್ಷ ಪರಿಹಾರ ಘೋಷಣೆ

ಪುತ್ತೂರು, ಅ. 22 : ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್ ರೈ ಅವರು ಘಟನೆಯನ್ನು ತಮ್ಮ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದರು. ತೆಂಕಿಲಾದ ವಿವೇಕಾನಂದ ಪ್ರಾಥಮಿಕ…

Read More

ಕೃಷ್ಣ ನಗರಿಯಲ್ಲಿ ದೀಪಾವಳಿ ಸಂಭ್ರಮ: ಶ್ರೀಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಸಂಪನ್ನ .

ಉಡುಪಿ:ದೇವಾಲಯಗಳ ನಗರಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ರಾತ್ರಿ ಸಂಭ್ರಮದ ಬಲೀಂದ್ರ ಪೂಜೆ ನಡೆಯಿತು. ತುಳುನಾಡಿನಲ್ಲಿ ಬಲೀಂದ್ರ ಪೂಜೆಗೆ ವಿಶೇಷ ಮಹತ್ವವಿದೆ. ಈ ಭಾಗವನ್ನು ಆಳಿದ ಅರಸ ಬಲೀಂದ್ರನಿಗೆ ದೀಪಾವಳಿಯ ವೇಳೆ ಸ್ವಾಗತ ಕೋರಿ ಆತಿಥ್ಯ ನಡೆಸುವುದು ಇಲ್ಲಿನ ಪದ್ಧತಿ. ವರ್ಷಕ್ಕೊಮ್ಮೆ ಅರಸನನ್ನು ಬರಮಾಡಿಕೊಂಡು ಗೌರವಿಸುವುದು ಸಂಪ್ರದಾಯ. ಈ ಆಚರಣೆಯನ್ನು ಬಲೀಂದ್ರ ಪೂಜೆ ಎಂದು ಕರೆಯಲಾಗುತ್ತದೆ. ಭತ್ತದ ಗದ್ದೆಗಳಲ್ಲಿ ದೀಪವಿಟ್ಟು ಬಲೀಂದ್ರನನ್ನು ಕೂಗಿ ‌ಕರೆಯಲಾಗುತ್ತದೆ. ಕೃಷಿ ಸಂಸ್ಕೃತಿಯೊಂದಿಗೆ ಬಲೀಂದ್ರ ಪೂಜೆ ತಳಕು ಹಾಕಿಕೊಂಡಿರುವುದರಿಂದ ಇವತ್ತಿಗೂ…

Read More
error: Content is protected !!