ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಗಮ
ಸೂರಂಬೈಲು: ಸರ್ಕಾರಿ ಪ್ರೌಢಶಾಲೆ ಸೂರಂಬೈಲು ವತಿಯಿಂದ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಹಳೇ ವಿದ್ಯಾರ್ಥಿ ಸಂಗಮ’ ಹೆಸರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ. ಜೊತೆಗೆ ಶಾಲೆಯೊಂದಿಗೆ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 20ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು…
