ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ವಿಧಿವಿಜ್ಞಾನ ವಿಶ್ಲೇಷಣೆಗೆ ಮೊಬೈಲ್ ಫೋನ್ ರವಾನೆ
ಉಡುಪಿ, ಅ. 21 : ಕಾರ್ಕಳದ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತನ ಮೊಬೈಲ್ ಫೋನ್ ಅನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. “ತನಿಖಾ ತಂಡವು ಫೋನ್ ದತ್ತಾಂಶ, ಬ್ಯಾಂಕ್ ವಹಿವಾಟುಗಳು ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಪ್ರಶ್ನಿಸಿದೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ಸಹ ಪರಿಶೀಲಿಸಲಾಗಿದೆ. ಇದರ ಜೊತೆಗೆ, ಮೃತನ ಸ್ನೇಹಿತರು, ಸಂಬಂಧಿಕರು ಮತ್ತು ಆಪ್ತರನ್ನೂ ವಿಚಾರಣೆ…
