ತಾಳಮದ್ದಲೆ ಮತ್ತು ಕಲಾವಿದರಿಗೆ ವಿಶ್ವೇಶ್ವರ ಭಟ್ಟರಿಂದ ಅವಹೇಳನ: ವ್ಯಾಪಕ ಖಂಡನೆ- ಕ್ಷಮಾಪಣೆಗೆ ಆಗ್ರಹ
ಉಡುಪಿ: ಕರಾವಳಿ, ಮಲೆನಾಡು ಭಾಗದ ಪ್ರಮುಖ ಕಲೆಗಳಲ್ಲಿ ಒಂದಾದ ಯಕ್ಷಗಾನ ತಾಳಮದ್ದಲೆ ಹಾಗೂ ತಾಳಮದ್ದಲೆ ಅರ್ಥಧಾರಿಗಳ ಕುರಿತಂತೆ ಅವಹೇಳನ, ಲೇವಡಿ, ಅಪಮಾನದ ಮಾತುಗಳನ್ನು ಸತತವಾಗಿ ತಮ್ಮ ಮಾಧ್ಯಮಗಳಲ್ಲಿ ಬರೆಯುತ್ತಿರುವ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್ಟದ ನಡೆಗೆ ತಾಳಮದ್ದಲೆ ಕಲಾವಿದರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಭಟ್ಟರು ತಕ್ಷಣ ಈ ಬಗ್ಗೆ ಕ್ಷಮಾಪಣೆ ಕೇಳಿ, ವಿವಾದಕ್ಕೆ ಇತಿಶ್ರೀ ಹಾಡಬೇಕೆಂದು ಒಕ್ಕೊರನಿಂದ ಆಗ್ರಹಿಸಿದ್ದಾರೆ. ವಿಶ್ವೇಶ್ವರ ಭಟ್ಟರು ಕಳೆದ ಕೆಲ ಸಮಯದಿಂದ ತಮ್ಮ ಮಾಧ್ಯಮಗಳಲ್ಲಿ ತಾಳಮದ್ದಲೆ ಕಲಾವಿದರ ಕುರಿತಂತೆ ನಡೆಸುತ್ತಿರುವ ಅವಹೇಳನದ…