ಉಡುಪಿ: ಜು. 15ರಂದು ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ, ರಾಷ್ಟ್ರೀಯ ನಾಟಕೋತ್ಸವ
ಉಡುಪಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.ಉಡುಪಿ ರಂಗಭೂಮಿ ಹಾಗೂ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ‘ವಂದೇ ಮಾತರಂ’ ಉತ್ಸವ, ಯುವ ರಂಗೋತ್ಸವ ಹಾಗೂ ‘ಸ್ವಾತಂತ್ರ್ಯ ಶರಧಿ’ ಕನ್ನಡ ನಾಟಕ ಪ್ರದರ್ಶನ…
