Headlines

ಬಾಯಾರು: ಶಾಲಾ ಬಸ್ಸು ಸ್ಕೂಟರ್ ಡಿಕ್ಕಿ .ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ಮಂಜೇಶ್ವರ : ಬಾಯಾರು ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಂದು ವಿದ್ಯಾರ್ಥಿ ಸ್ಥಿತಿ ಚಿಂತಾಜನಕವೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಯಾರು ಪೊನ್ನಂಗಳ ಮುಜಮ್ಮ ಸಶಾಫತ್ ಸುನ್ನಿ ಶಾಲಾ ಬಸ್ಸು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಪೈವಳಿಕೆ ಅಕಾಡೆಮಿಕ್ ಶಾಲೆಯ ಪ್ಲಸ್ 2 ವಿದ್ಯಾರ್ಥಿಗಳಾದ ಸಾದಿಖ್ ಹಾಗೂ ಮೊಯಿನುದ್ದೀನ್ ಅಪಘಾತದಿಂದ ಗಾಯಗೊಂಡಿದ್ದಾರೆ.

Read More

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ರೂಪೀಕರಣ.

ಮೀಯಪದವು:ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮ್ಮೇಳನ ಹಾಗೂ ಮಹಾಸಭೆ ವಿದ್ಯಾವರ್ಧಕ ಪ್ರೌಢ ಶಾಲೆ ಮೀಯಪದವು ಶಾಲೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರುಅಶೋಕ್ ಕೊಡ್ಲಮೊಗರು ಉಪಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಡಾಜೆ ಇಲ್ಲಿಯ ಶಿಕ್ಷಕರಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು, ಉಪಾಧ್ಯಕ್ಷರುಗಳಾಗಿ ಶ್ರೀ ಶಿವರಾಮ ಭಟ್ ಮುಖ್ಯ ಶಿಕ್ಷಕರು ಸರಕಾರಿ ಶಾಲೆ ಕಾಯರ್ ಕಟ್ಟೆ , ಶ್ರೀ…

Read More

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ.

ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಚಿನ್ನಯ್ಯನನ್ನು ಮತ್ತೆ…

Read More

ದ.ಕ-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರದಿಂದ “ಮಾಸ್ಟರ್ ಪ್ಲಾನ್”!ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ.

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು“ಟೂರಿಸಂ ಹಬ್” ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಈ ಕುರಿತು…

Read More

ಸಾಮ್ರಾಜ್ಯಶಾಹಿ ವಿರುದ್ಧ ಪ್ರತಿಭಟನೆ: ಇಸ್ರೇಯಿಲ್ ನರಮೇಧ ವಿರೋಧಿಸಿ ಸಿಪಿಐಎಂ ನೇತೃತ್ವದಲ್ಲಿ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ.

ಮಂಜೇಶ್ವರ: ಇಸ್ರೇಯಿಲ್ ನಡೆಸುತ್ತಿರುವ ನರಮೇಧವನ್ನು ತೀವ್ರವಾಗಿ ಖಂಡಿಸಿ ಹಾಗೂ ಅದರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಕುಂಜತೂರಿನಲ್ಲಿ ಸಿಪಿಐಎಂ ನೇತೃತ್ವದಲ್ಲಿ ಸಾಮ್ರಾಜ್ಯಶಾಹಿ ವಿರುದ್ಧ ಬೃಹತ್ ಪ್ರತಿಭಟನೆ, ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಸಿಪಿಐಎಂ ಮಂಜೇಶ್ವರ ಏರಿಯಾ ಸದಸ್ಯ ಕೆ. ಕಮಲಾಕ್ಷ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಇಸ್ರೇಯಿಲ್ ನಡೆಸುತ್ತಿರುವ ದಾಳಿಗಳು ಮನುಷ್ಯತ್ವದ ವಿರುದ್ಧದ ಕ್ರೂರ ದಾಳಿಗಳಾಗಿವೆ. ಗಾಜಾ ಮತ್ತು ಪ್ಯಾಲಸ್ತೀನಾ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣ ನಿಲ್ಲಿಸಬೇಕು. ಭಾರತ ಸೇರಿದಂತೆ ಎಲ್ಲ…

Read More

ಕಾಸರಗೋಡು ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೇರಳ ಸಿಎಂ ಭೇಟಿ….!

ಕಾಸರಗೋಡು:ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ರನ್ನು ಇಂದು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಶ್ರೀ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್, ಶ್ರೀ ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಜೊತೆಗಿದ್ದರು ಹಾಗೂ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ…

Read More

“ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್ ಅಪ್‌ಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿ ಅಳಿಸಲಾಗದ ಕೊಡುಗೆಯನ್ನು ನೀಡಿದ್ದಾರೆ-ಸಿಎ ಎಸ್.ಎಸ್. ನಾಯಕ್

ಮಂಗಳೂರು:ಉದ್ಯಮೇನ ಹಿ ಕ್ರಾಂತಿ- ಉದ್ಯಮದಿಂದಲೇ ಕ್ರಾಂತಿ ಎಂಬ ಧೈಯವಾಕ್ಯದೊಂದಿಗೆ ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಇವರ ಸಂಯುಕ್ತ ಆಶಯದಲ್ಲಿ ಕರಾವಳಿ ಎಂಎಸ್‌ಎಂಇ ಹಾಗೂ ಸ್ಮಾರ್ಟ್‌ ಅಪ್ ಕಾನ್‌ವ್ – 2025 ಅನ್ನು ಸೆಪ್ಟೆಂಬರ್ 20 ರಂದು ಶನಿವಾರ ಮಂಗಳೂರಿನ ರೆಡ್ ಕ್ರಾಸ್ ಪೇರಣಾ ಸಭಾಭವನದಲ್ಲಿ ಆಯೋಜಿಸಲಾಗುತ್ತಿದೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನ್‌ ಕೇವ್ ನಿರ್ದೇಶಕ ಸಿಎ ಎಸ್.ಎಸ್. ನಾಯಕ್ ಮಾತನಾಡಿ, “ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್…

Read More

ದ. ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ. ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು‌. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು…

Read More

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ 2024-25 ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ – ರವಿರಾಜ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ. ಸೋಮವಾರ ಒಕ್ಕೂಟದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 751 ಹಾಲು ಸಂಘಗಳು ಪ್ರಸ್ತುತ ಪ್ರತಿದಿನ 3.97 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿವೆ ಎಂದು ಹೇಳಿದರು. “2024-25ರಲ್ಲಿ, ಸಂಗ್ರಹವು ದಿನಕ್ಕೆ 3.42 ಲಕ್ಷ ಲೀಟರ್…

Read More

ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮ ಸೆಪ್ಟೆಂಬರ್ 21ರಂದು

ಮಂಗಳೂರು:ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದ ಆವರಣದಲ್ಲಿ ಪೂರ್ಣ ದಿನದ ಕಾರ್ಯಕ್ರಮದೊಂದಿಗೆ ನಡೆಸಲಾಗುವುದು ಎಂದು ತುಳುನಾಡು ಶಿಕ್ಷಣ ಸಂಸ್ಥೆ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಬನ್ನಂಜೆಯವರು ಬದುಕಿದ್ದರೆ ಈಗ 90 ವರ್ಷ ಪೂರೈಸುತ್ತಿದ್ದರು. ಆ ನೆನಪಿಗಾಗಿ ಕರ್ನಾಟಕ ಮಾತ್ರವಲ್ಲದೆ ಹೃಷಿಕೇಶ ಮತ್ತು ಅಮೆರಿಕ ಸೇರಿದಂತೆ…

Read More
error: Content is protected !!