10 ಕಾಲೇಜು ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಟಿವ್ ; ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲಾಗುತ್ತಿದ್ದು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ತಪಾಸಣೆಯ ಸಂದರ್ಭ 10 ಮಂದಿ ವಿದ್ಯಾರ್ಥಿಗಳು ಡ್ರಗ್ಸ್ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡ್ರಗ್ಸ್ ನಿಯಮಿತ ತಪಾಸಣೆ ಕುರಿತಂತೆ 113 ಕಾಲೇಜುಗಳು ಮುಂದೆ ಬಂದಿವೆ. ಅದರಲ್ಲಿ ಕೆಲವೊಂದು ದೂರು ಹಾಗೂ ಅನುಮಾನದ ಮೇರೆಗೆ ತಪಾಸಣೆ…
