ʻಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿʼ-ಮಂಜುನಾಥ ಭಂಡಾರಿ
ಮಂಗಳೂರು: ʻರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ. ದೇಶದಲ್ಲಿ ಅಕ್ರಮ ಮತದಾನ, ಮತಗಳ್ಳತನ, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಮತಗಳ್ಳತನದ ಸಾಕಷ್ಟು ಪುರಾವೆಗಳು ಕಣ್ಣ ಮುಂದಿವೆʼ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ…
