ಕಾಸರಗೋಡಿನಲ್ಲಿ ಮಲೆಯಾಳ ಮಸೂದೆಗೆ ವಿರೋಧ: ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಆಗ್ರಹ
ಕಾಸರಗೋಡು: ಜಿಲ್ಲೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ವಿಧಾನಸಭೆ ಇತ್ತೀಚೆಗೆ ಅಂಗೀಕರಿಸಿದ ಮಲೆಯಾಳ ಭಾಷಾ ಕಲಿಕೆ ಕಡ್ಡಾಯ ಮಸೂದೆ, ಕಾಸರಗೋಡಿನ ಕನ್ನಡಿಗರಲ್ಲಿ ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷಿಕರನ್ನು ಮಸೂದೆಯ ವ್ಯಾಪ್ತಿಯಿಂದ ಹೊರತಾಗಿಸಬೇಕು ಎಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ಹಾಗೂ ನ್ಯಾಯವಾದಿ ಕೆ. ಶ್ರೀಕಾಂತ್ ಆಗ್ರಹಿಸಿದ್ದಾರೆ. ಕಾಸರಗೋಡು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಕನ್ನಡಿಗರಿಗೆ ತಮ್ಮ ತಾಯ್ನುಡಿಯಲ್ಲೇ ಶಿಕ್ಷಣ ಪಡೆಯುವ ಹಕ್ಕು ಸಿಗಬೇಕು….