Headlines

ಮೀoಜದಲ್ಲಿ ವಿ ಎಸ್ ರಿಗೆ ಸರ್ವಪಕ್ಷ ಸಂತಾಪ ಸೂಚಕ ಸಭೆ.

ಮೊನ್ನೆ ನಿಧನರಾದ ಕೇರಳದ ಮಾಜಿ ಮುಖ್ಯ ಮಂತ್ರಿ, ಸಿಪಿಐಎಂ ಹಿರಿಯ ನೇತಾರ ವಿ ಎಸ್ ಅಚ್ಚುತಾನಂದನ್ ರವರ ನಿಧನಕ್ಕೆ ಸಿಪಿಐಎಂ ಮೀoಜ ಪಂಚಾಯತಿನ ಲೋಕಲ್ ಸಮಿತಿ ನೇತೃತ್ವದಲ್ಲಿ ಮೀಯಪದವಿನಲ್ಲಿ ಸರ್ವಪಕ್ಷ ಸಂತಾಪ ಸಭೆ ನಡೆಯಿತು. ಸಿಪಿಎಂ ನಾಯಕ ಕೆ ಆರ್ ಜಯಾನಂದ, ಸಿಪಿಐ ನೇತಾರ ರಾಮಕೃಷ್ಣ ಕಡoಬಾರ್, BJP ನಾಯಕ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀ ಕೆ ವಿ ರಾಧಾಕೃಷ್ಣ, ಕಾಂಗ್ರೆಸ್ ನಾಯಕ ಶ್ರೀ ದಾಮೋದರ ಮಾಸ್ಟರ್, ಮಾಣಿ ಕಾಂಗ್ರೆಸ್ ನಾಯಕ ಶ್ರೀ ರಾಘವ ಚೇರಲ್, ಎಸ್…

Read More

ಮಾಜಿ ಸಿ ಎಂ ವಿ.ಎಸ್.ರಿಗೆ ಉಪ್ಪಳದಲ್ಲಿ ಸಂತಾಪ, ಮೌನ ಮೆರವಣಿಗೆ

ಉಪ್ಪಳ : ಹಿರಿಯ ಸಿ..ಪಿ.ಐ(ಎಂ) ಮುಖಂಡ. ಮಾಜಿ ಮುಖ್ಯ ಮಂತ್ರಿ.ವಿ. ಎಸ್.ಅಚ್ಯುತಾನಂದನವರ ನಿಧನಕ್ಕೆ ಸಂತಾಪ ಸೂಚಿಸಿ ಸಿ.ಪಿ.ಐ.(ಎಂ) ಉಪ್ಪಳ ಲೋಕಲ್ ಕಮೀಟಿಯಿಂದ ಉಪ್ಪಳ ದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಏರಿಯಾ ಕಮಿಟಿ ಸದಸ್ಯರಾದ ಸಾದಿಕ್ ಚೆರುಗೋಲಿ ಉದ್ಘಾಟಿಸಿ ಮಾತನಾಡಿದರು.ಇದರ ಅಧ್ಯಕ್ಷತೆ ಯನ್ನು ಲೋಕಲ್ ಕಮೀಟಿ ಸದಸ್ಯ ಉಮೇಶ್ ಶೆಟ್ಟಿ ಬೋಳ್ಳಾರು ವಹಿಸಿದರು. ಉಪ್ಪಳ ಲೋಕಲ್ ಕಮಿಟಿ ಸದಸ್ಯರಾದ ಪ್ರವೀಣ್ ಕಣ್ಣಾಟಿಪರೆ. ಸರೋಜ ಶಾಂತಿಯೋಡು. ಪಾರ್ವತಿ ಬೇಕೂರು. ಅಬ್ದುಲ್ ಅಜೀಜ್ ಉಪ್ಪಳ ಭಾಗವಹಿಸಿದ್ದರು ಸಿ.ಪಿ. ಐ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವತಿಯಿಂದ ಆಟಿಡೊಂಜಿ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ತಾಲೂಕಿನ ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಶ್ರೀ ತುಳಸಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಆಟಿಡೊಂಜಿ ದಿನ ಆಟಿಕೂಟ ಕಾರ್ಯಕ್ರಮ ತರುಣ ಕಲಾವೃಂದ ಪರಕಿಲ್ಲದಲ್ಲಿ ಭಾನುವಾರ ನಡೆಯಿತು . ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ದೀಪ ಬೆಳಗಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು . ಶ್ರೀಮತಿ ದೀಪ ವಾಸು ಉಳಿಯ ಅಧಕ್ಷತೆ ಸ್ಥಾನ ವಹಿಸಿದರು . ಈ ಸಂದರ್ಭದಲ್ಲಿ ಗಡಿನಾಡ ಪ್ರಶಸ್ತಿ ಪಡೆದ ಕವಿ , ಸಾಹಿತಿ , ಶ್ರೀ ರಾಧಾಕೃಷ್ಣ…

Read More

ಕೂಳೂರು ಸೇತುವೆ ರಸ್ತೆ ದುರಸ್ತಿ | ಪರ್ಯಾಯ ಮಾರ್ಗಗಳ ಮಾಹಿತಿ

ಮಂಗಳೂರು ನಗರದಲ್ಲಿ ಒಂದು ಪ್ರಮುಖ ರಸ್ತೆಯ ಕಾಮಗಾರಿ – ಕೂಲೂರು ಸೇತುವೆ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಗೊಳ್ಳುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66, ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8 ಗಂಟೆಯಿಂದ, ಜುಲೈ 25ರ ಬೆಳಗ್ಗೆ 8 ಗಂಟೆವರೆಗೆ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಹೊಸ ಕೂಳೂರು ಸೇತುವೆ ದ್ವಿಪಥ ರಸ್ತೆಯಾಗಿ ಪರಿವರ್ತನೆಗೊಳ್ಳಲಿದೆ….

Read More

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿ: ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತ‌ರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು,…

Read More

ಕನ್ನಡ ಭವನ ರೂವಾರಿಗಳಿಗೆ ಡಾ. ಸಿ ಸೋಮಶೇಖರ್ ಗೌರವ ಸನ್ಮಾನ.

ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡು ಕನ್ನಡ ಭವನ ಗ್ರಂಥಾಲಯ ದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಯನ್ನು ತನ್ನ ನಿವಾಸಕ್ಕೆ ಬರಮಾಡಿಕೊಂಡು ಕನ್ನಡ ಭವನ ಹಾಗೂ ಕೇರಳ ರಾಜ್ಯ -ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಗಳನ್ನು, ವಿಶೇಷವಾಗಿ ಕಾಸರಗೋಡು ಜಿಲ್ಲೆಯ ಹೊರಗೆ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ತನ್ನ ಕಾರ್ಯ…

Read More

ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ

ಬೆಂಗಳೂರು: ವೈಟ್‌ಫೀಲ್ಡ್‌ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್‌ನಲ್ಲಿ, ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು (ಕಾಸರಗೋಡು) ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ಆಚರಿಸಿದರು. ಈ ಸಂಭ್ರಮದ ಅಂಗವಾಗಿ *ಅವಾರ್ಡ್ ಪ್ರದಾನ ಸಮಾರಂಭ ಮತ್ತು ಚುಟುಕು ಕವಿ-ಕಾವ್ಯ ಸಂಗಮ ನಡೆಯಿತು.ಭಾಷೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದವರಿಗೆ, ಕಾಸರಗೋಡು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯವು…

Read More

ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿರುವುದನ್ನು ಖಂಡಿಸಿ ನ್ಯಾಯ ಒದಗಿಸುವಂತೆ ಶಾಸಕರಿಗೆ ಮನವಿ

ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ‌ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಮುದಾಯದ ಮುಖಂಡರ ಅಹವಾಲನ್ನು ಆಲಿಸಿದ ಶಾಸಕರು,…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯು ಭಾನುವಾರ ವನಿತಾ ಭವನ ಕೂಡ್ಲುನಲ್ಲಿ ನಡೆಯಿತು . ಒಕ್ಕೂಟದ ಅಧಕ್ಷರಾದ ಶ್ರೀಮತಿ ಪ್ರಮೀಳಾ ಕೂಡ್ಲು ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಒಕ್ಕೂಟ ಸಭೆಯಲ್ಲಿ ವಲಯದ ಮೇಲ್ವಿಚಾರಕರದ ಶ್ರೀ ಗೋಪಾಲಕೃಷ್ಣ , ಕೃಷಿ ಮೇಲ್ವಿಚಾರಕರದ ಶ್ರೀ ಜಯರಾಮ , ಕೂಡ್ಲು ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಮಾಯಿಪಾಡಿ , VLA ಸೌಮ್ಯ , ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸಂಘದ ಎಲ್ಲಾ…

Read More

ಢಾಕಾ ಶಾಲಾ ಕಟ್ಟಡದ ಮೇಲೆ ತರಬೇತಿ ಜೆಟ್ ಬ್ಲಾಸ್ಟ್ : ಮಡಿದವರ ಸಂಖ್ಯೆ 27ಕ್ಕೆ ಏರಿಕೆ

ಢಾಕಾ:ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ ಇದೀಗ 27ಕ್ಕೆ ಏರಿಕೆಯಾಗಿದೆ.ಸಾವನ್ನಪ್ಪಿದವರಲ್ಲಿ 25 ವಿದ್ಯಾರ್ಥಿಗಳಿದ್ದಾರೆ . ಸುಮಾರು 170 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ಮಾಹಿತಿ ನೀಡಿದ್ದಾರೆ. ಜುಲೈ 21ರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ…

Read More
error: Content is protected !!