ಮಂಜೇಶ್ವರ ಸರಕಾರಿ ಆಸ್ಪತ್ರೆಯ ಶೋಚನೀಯಾವಸ್ತೆ .ಎಸ್ ಡಿ ಪಿ ಐ ಪ್ರತಿಭಟನೆ
ಮಂಜೇಶ್ವರ: ಮಂಜೇಶ್ವರ ಸಿ.ಎಚ್.ಸಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಔಷಧಿಗಳ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ಒದಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಂಜೇಶ್ವರ ಗ್ರಾಮಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಆಸ್ಪತ್ರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಸೂಕ್ತ ವೈದ್ಯರು ಹಾಗೂ ಔಷಧಿಗಳು ಲಭ್ಯವಿಲ್ಲದಿರುವುದು ಆರೋಗ್ಯದ ದೃಷ್ಟಿಯಿಂದ ಗಂಭೀರ ಸಮಸ್ಯೆ ಉಂಟಾಗುವುದಾಗಿ ಪ್ರತಿಭಟನಾ ನಿರತರು ಆರೋಪಿಸಿದರು. ಮಂಜೇಶ್ವರ ಉಪನೋಂದಣಿ ಕಚೇರಿ ಪರಿಸರದಿಂದ ಆರಂಭಗೊಂಡ ಮೆರವಣಿಗೆಯನ್ನು ಪೊಲೀಸರು ಆಸ್ಪತ್ರೆ…
