ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್ ರಚನೆ ! ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ
ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್‌ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ಕಳೆದ ವರ್ಷದ ಜೂನ್ ತಿಂಗಳಲ್ಲಿ ಸರ್ಕಾರ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಅನ್ನು ರಚಿಸಿತ್ತು. ನಕ್ಸಲ್ ನಿಗ್ರಹಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಎಎನ್‌ಎಫ್ (Anti Naxal Force) ಅಗತ್ಯವಿಲ್ಲ…
