Headlines

ವಿರಾಜ್ ಅಡೂರುಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು : ನಾಡಿನ ಸಾಹಿತಿ, ಅಂಕಣ ಬರಹ ಲೇಖಕ, ವ್ಯಂಗ್ಯಚಿತ್ರಗಾರ, ಶಿಬಿರ ಸಂಘಟಕ. ಶಿಬಿರ ಸಂಪನ್ಮೂಲ ವ್ಯಕ್ತಿ, ಪತ್ರಕರ್ತರಾದ ವಿರಾಜ್ ಅಡೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ…

Read More

ಕನ್ಯಾನ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಕನ್ಯಾನ ಸಮೀಪದ ಕೊಣಲೆ ಮಳವೆಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತರನ್ನು ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Read More

ಮಂಗಳೂರು ಮತ್ತು ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ.

ಮಂಗಳೂರಿನಲ್ಲಿ ನಡೆಯುವ ಕೊಂಕಣಿ ೫ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಮಾಹಿತಿ ನೀಡಿದರು.ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,೧೯ ಜುಲೈ ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೊಂದಾವಣೆ ಮಾಡಿದ್ದಾರೆ. ಹಿಂದಿನ…

Read More

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ಬೆಲೆ ₹1.34 ಲಕ್ಷ

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಮೊಬೈಲ್ ಟವರ್‌ಗಳಿಲ್ಲದ ಪ್ರದೇಶಗಳಲ್ಲೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಹೊಸ ಸ್ಯಾಟಲೈಟ್ ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್‌ನ ಬೆಲೆ ತೆರಿಗೆ ಸೇರಿ ₹1,34,166 ಎಂದು ಸಂಸ್ಥೆ ತಿಳಿಸಿದೆ. ಸಾಮಾನ್ಯ ಮೊಬೈಲ್‌ಗಳಿಗಿಂತ ಭಿನ್ನವಾಗಿ, ಈ ಫೋನ್ ಸೆಲ್ಯುಲಾರ್ ನೆಟ್‌ವರ್ಕ್ ಬದಲಿಗೆ ನೇರವಾಗಿ ಉಪಗ್ರಹದ ಮೂಲಕ ಕಾರ್ಯನಿರ್ವಹಿಸುತ್ತದೆ. ಹೀಗಾಗಿ ದಟ್ಟ ಕಾಡು, ಸಮುದ್ರ, ಗಡಿ ಪ್ರದೇಶ ಹಾಗೂ ಹಿಮಾಲಯದಂತಹ ದುರ್ಗಮ ಪ್ರದೇಶಗಳಲ್ಲೂ ವಾಯ್ಸ್ ಕಾಲ್ ಮತ್ತು ಎಸ್‌ಎಂಎಸ್…

Read More

ರಾಜೇಂದ್ರ ಕಲ್ಲೂರಾಯರಗೆ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು : ನಿವೃತ್ತ ಶಿಕ್ಷಕ, ಯಕ್ಷಗಾನ ಅರ್ಥಧಾರಿ, ಕಾಸರಗೋಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕ್ರಿಯಾಶೀಲವಾದ, ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ…

Read More

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಆಶೀರ್ವಾದ ಪಡೆದರು. ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸುಭಿಕ್ಷತೆ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. Z-ಪ್ಲಸ್ ಭದ್ರತೆಯ ನಡುವೆ ಅವರು ದೇವಸ್ಥಾನಕ್ಕೆ ಆಗಮಿಸಿದ್ದರಿಂದ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿಯಾದ ಬಳಿಕ ಸತೀಶನ್ ಅವರ ಇದು ಕೊಲ್ಲೂರು…

Read More

ಇರಾನ್ ಮಾತುಕತೆಗೆ ಒಪ್ಪಿದ ಅಮೆರಿಕ;ಕದನ ವಿರಾಮ ಮುಗಿದಿದೆ ಎಂದ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಮತ್ತಷ್ಟು ಮಾತುಕತೆ ನಡೆಸಲು ಅಮೆರಿಕ ಸಮ್ಮತಿಸಿದೆ ಎಂದು ತಿಳಿಸಿದ್ದಾರೆ. ಆದರೆ, ಎರಡೂ ರಾಷ್ಟ್ರಗಳ ನಡುವಿನ ಕದನ ವಿರಾಮ ಈಗಾಗಲೇ ಅಂತ್ಯಗೊಂಡಿದ್ದು, ಈ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ಅವರು ತಮ್ಮ ಟ್ರೂತ್ ಸೋಶಿಯಲ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಳೆದ ತಿಂಗಳಿನಿಂದ ಅಮೆರಿಕ ಮತ್ತು ಇರಾನ್ ನಡುವೆ ನೇರ ಮಾತುಕತೆ ನಡೆದಿಲ್ಲ. ಈ ವಾರ ಎರಡೂ ದೇಶಗಳು ಪರಸ್ಪರ ದಾಳಿಗಳನ್ನು ನಡೆಸಿದ ಬೆನ್ನಲ್ಲೇ ಮಧ್ಯವರ್ತಿಯಾಗಿರುವ ಕತಾರ್‌ನ ನಿಯೋಗ ಟೆಹ್ರಾನ್‌ಗೆ…

Read More

ಬಹಾಮಾಸ್‌ನಲ್ಲಿ ಸಣ್ಣ ವಿಮಾನ ಪತನ:10 ಮಂದಿ ದುರ್ಮರಣ

ನಸ್ಸೌ (ಬಹಾಮಾಸ್): ಬಹಾಮಾಸ್ ರಾಜಧಾನಿ ನಸ್ಸೌ ನಗರದ ಪಶ್ಚಿಮ ಭಾಗದಲ್ಲಿರುವ ನಾರ್ತ್ ಆಂಡ್ರೋಸ್ ದ್ವೀಪದಲ್ಲಿ ಫ್ಲೆಮಿಂಗೊ ಏರ್ ಸಂಸ್ಥೆಗೆ ಸೇರಿದ ಸಣ್ಣ ವಿಮಾನ ಶುಕ್ರವಾರ ಸಂಜೆ ಪತನಗೊಂಡು, ಅದರಲ್ಲಿದ್ದ ಎಲ್ಲಾ 10 ಮಂದಿ ಮೃತಪಟ್ಟಿದ್ದಾರೆ. ಬಹಾಮಾಸ್ ಪೊಲೀಸ್ ಆಯುಕ್ತೆ ಶಾಂತಾ ನೋಲ್ಸ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ವಿಮಾನದಲ್ಲಿ ಒಂಬತ್ತು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಪ್ರಯಾಣಿಸುತ್ತಿದ್ದರು. ಅಪಘಾತದ ಬಳಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ, ಯಾರೂ ಜೀವಂತವಾಗಿ ಉಳಿದಿರಲಿಲ್ಲ ಎಂದು ತಿಳಿಸಿದರು.ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು…

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ……

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ…

Read More

ವಿ.ಡಿ. ಸತೀಶನ್ ಅವರನ್ನು ಭೇಟಿ ಮಾಡಿ ಸ್ವಾಗತಿಸಿದ ಐವನ್ ಡಿ’ಸೋಜಾ

ಮಂಗಳೂರು:ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ ಕೇರಳ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಆತ್ಮೀಯವಾಗಿ ಭೇಟಿ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಉಭಯ ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧ, ಕರಾವಳಿ ಭಾಗದ ಅಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಜನಪರ ವಿಚಾರಗಳ ಕುರಿತು ಆತ್ಮೀಯ ಮಾತುಕತೆ ನಡೆಯಿತು. ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಐವನ್ ಡಿ’ಸೋಜಾ ಅವರು ಶುಭಾಶಯಗಳನ್ನು ತಿಳಿಸಿದರು. ಈ ಭೇಟಿಯು ಕರ್ನಾಟಕ–ಕೇರಳ ರಾಜ್ಯಗಳ…

Read More
error: Content is protected !!