ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರಕರ ಬೈಠಕ್ ಆರಂಭ
ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಶುಕ್ರವಾರ ಬೆಳಗಾವಿಯಲ್ಲಿ ಆರಂಭಗೊಂಡಿದ್ದು, ದೇಶದ ವಿವಿಧ ಭಾಗಗಳಿಂದ ಹಿರಿಯ ಪ್ರಚಾರಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಮೂರು ದಿನಗಳ ಈ ಸಭೆ ಜುಲೈ 12ರಂದು ಮುಕ್ತಾಯಗೊಳ್ಳಲಿದೆ. ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಷ್ಟ್ರವ್ಯಾಪಿ ಜನಗಣತಿ, ಸಂಘಟನಾ ಚಟುವಟಿಕೆಗಳು, ಶಾಖೆಗಳ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ದೇಶದ…
