Headlines

ಸಂಡೇ ಬಜಾರ್‌ಗೆ ಅವಕಾಶ ನೀಡುವಂತೆ ಆಗ್ರಹ: ಮನಪಾ ಎದುರು ಬೀದಿಬದಿ ವ್ಯಾಪಾರಿಗಳ ಅಹೋ ರಾತ್ರಿ ಧರಣಿ

ಮಂಗಳೂರು | ಜು. 9: ಬೀದಿಬದಿ ವ್ಯಾಪಾರಿಗಳ ಮೇಲಿನ ತೆರವು ಕಾರ್ಯಾಚರಣೆ ಖಂಡಿಸಿ ಹಾಗೂ ಸಂಡೇ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಆರಂಭವಾಯಿತು. ಧರಣಿಯ ವೇಳೆ ಮಹಿಳಾ ಬೀದಿಬದಿ ವ್ಯಾಪಾರಿಯೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಚುನಾವಣೆ ವೇಳೆ ಬಡವರ ಮತ ಬೇಕಾಗುತ್ತದೆ. ಆದರೆ ವಾರದಲ್ಲಿ ಒಂದು ದಿನ ವ್ಯಾಪಾರ…

Read More

ಇರಾನ್‌ನಲ್ಲಿ ಭಾರೀ ಹಾನಿ, ಜೀವಹಾನಿ; ದಾಳಿಗೆ ಗುರಿಯಾದ ರೈಲು ಸೇತುವೆ, ಖಮೇನಿ ಅಂತ್ಯಕ್ರಿಯೆ ಮುಂದೂಡಿಕೆ

ಇರಾನ್‌ನಲ್ಲಿ ಅಮೆರಿಕ ನಡೆಸಿದ ದಾಳಿಯಿಂದ ಭಾರೀ ಆಸ್ತಿ ಹಾನಿ ಮತ್ತು ಜೀವಹಾನಿ ಸಂಭವಿಸಿದೆ. ಈ ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದು, 78 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ತಿಳಿಸಿದೆ. ದಾಳಿಗೆ ಗುರಿಯಾದ ಪ್ರದೇಶಗಳಲ್ಲಿ ಪ್ರಮುಖ ರೈಲು ಸೇತುವೆಯೂ ಸೇರಿದೆ. ಇರಾನ್‌ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಮುಂದೂಡಲಾಗಿದೆ. ಇಂದು ಬೆಳಿಗ್ಗೆ ನಡೆಯಬೇಕಿದ್ದ ಅಂತ್ಯಕ್ರಿಯೆಯನ್ನು ಸ್ಥಳೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಸಂಸ್ಕಾರವು…

Read More

ಪತಿ ವಿರುದ್ಧ ಆಸ್ತಿ ಹಾಗೂ ಚಿನ್ನ ಕಬಳಿಕೆ ಆರೋಪ: ನ್ಯಾಯಕ್ಕಾಗಿ ಪತ್ನಿಯ ಮನವಿ

ಸುಳ್ಯ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಮದುವೆ ಸಂದರ್ಭದಲ್ಲಿ ತಂದೆ ನೀಡಿದ್ದ ಚಿನ್ನಾಭರಣ ಹಾಗೂ ಆಸ್ತಿಯನ್ನು ಕಬಳಿಸಿ ತನಗೂ ಮಕ್ಕಳಿಗೂ ಅನ್ಯಾಯ ಮಾಡಿದ್ದಾರೆ ಎಂದು ಅವರ ಪತ್ನಿ ಶಮಾ ಶಹೀದ್ ಆರೋಪಿಸಿದ್ದಾರೆ. ಸುಳ್ಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆ ವೇಳೆ ತಂದೆ ನೀಡಿದ್ದ 110 ಪವನ್ ಚಿನ್ನ ಹಾಗೂ ತಮ್ಮ ಹೆಸರಿನ ಆಸ್ತಿಯನ್ನು ಪತಿ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಶ್ನಿಸಿದಾಗ, “ನೀನು ಸಿಎಂ ಅಥವಾ ಪಿಎಂ…

Read More

ಬೀದಿಬದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ: ಮುನೀರ್ ಕಾಟಿಪಳ್ಳ ಆಕ್ರೋಶ

ಮಂಗಳೂರು, ಜು. 10: ಬಡವರ ಜೀವನೋಪಾಯದ ಬಗ್ಗೆ ಕಾಳಜಿ ವಹಿಸದೆ ಬೀದಿಬದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಆರಂಭಗೊಂಡ ಹಗಲು-ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುರೋಪ್ ಮಾದರಿಯ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ಬಗ್ಗೆ ಮಾತನಾಡುವ…

Read More

ಉಜ್ಬೇಕಿಸ್ತಾನದಲ್ಲಿ ಹತ್ಯೆಯಾದ ಸಾವರಿ ಬಸಂತ್ ಪ್ರಕರಣ: ಸಹಪಾಠಿಯಿಂದ ಅಮಾನುಷ ಹಲ್ಲೆ, ಮತಾಂತರಕ್ಕೆ ನಿರಂತರ ಒತ್ತಾಯ – ಕುಟುಂಬದ ಗಂಭೀರ ಆರೋಪ

ಉಜ್ಬೇಕಿಸ್ತಾನದಲ್ಲಿ ಹತ್ಯೆಯಾದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ಸಾವರಿ ಬಸಂತ್ ಅವರನ್ನು ಸಹಪಾಠಿ ಸಾದರುಲ್ ಅನಂ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಕುಟುಂಬ ಆರೋಪಿಸಿದೆ. ತಲೆಯಿಂದ ಕಾಲುವರೆಗೆ ಅಮಾನುಷವಾಗಿ ಥಳಿಸಲಾಗಿದ್ದು, ಪ್ರಕರಣದ ಕುರಿತು ಉಜ್ಬೇಕಿಸ್ತಾನದಿಂದ ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ ಎಂದು ಸಂಬಂಧಿಕರು ತಿಳಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಹುಡುಗರು ಮತ್ತು ಹುಡುಗಿಯರು ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದು, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದೆ. ಊಟಕ್ಕೂ ಸರಿಯಾದ ವ್ಯವಸ್ಥೆ ಇಲ್ಲ ಎಂದು ಕುಟುಂಬ ಆರೋಪಿಸಿದೆ. ಮೃತದೇಹದ ಮೇಲಿದ್ದ ಗಾಯಗಳನ್ನು ತನಿಖಾಧಿಕಾರಿಗಳು ತೋರಿಸಿದ್ದು, ಇದು…

Read More

ಬೊಜ್ಜು ಹೆಚ್ಚಾದ್ರೆ 19 ವಿವಿಧ ರೀತಿಯ ಕ್ಯಾನ್ಸರ್‌ಗಳ ಅಪಾಯಕ್ಕೆ ಕಾರಣ

ವಿಶ್ವ ಆರೋಗ್ಯ ಸಂಸ್ಥೆ (WHO) ಬೊಜ್ಜುತನವನ್ನು ಅಸಹಜ ಅಥವಾ ಅತಿಯಾದ ಕೊಬ್ಬಿನ ಶೇಖರಣೆಯಿಂದ ನಿರೂಪಿಸಲ್ಪಟ್ಟ ದೀರ್ಘಕಾಲದ, ಬಹುಕ್ರಿಯಾತ್ಮಕ ಕಾಯಿಲೆ ಎಂದು ವ್ಯಾಖ್ಯಾನಿಸುತ್ತದೆ, ಇದು ಆರೋಗ್ಯಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುತ್ತದೆ.1.5 ಮಿಲಿಯನ್‌ಗಿಂತಲೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳ ದೊಡ್ಡ ಹೊಸ ವಿಮರ್ಶೆಯು ಬೊಜ್ಜುತನವು 19 ವಿವಿಧ ರೀತಿಯ ಕ್ಯಾನ್ಸರ್‌ಗಳ ಹೆಚ್ಚಿನ ಅಪಾಯಕ್ಕೆ ಸಂಬಂಧಿಸಿದೆ ಎಂದು ಕಂಡುಹಿಡಿದಿದೆ. ಇದು ಪ್ರಮುಖ, ತಡೆಗಟ್ಟಬಹುದಾದ ಅಪಾಯಕಾರಿ ಅಂಶವಾಗಿ ಅದರ ಪಾತ್ರವನ್ನು ಬಲಪಡಿಸುತ್ತದೆ. ನೇಚರ್ ಮೆಟಾಬಾಲಿಸಂನಲ್ಲಿ ಪ್ರಕಟವಾದ ಅಧ್ಯಯನವು ಲ್ಯುಕೇಮಿಯಾ, ಹಾಡ್ಗ್ಕಿನ್ ಅಲ್ಲದ ಲಿಂಫೋಮಾ, ಮೂತ್ರಕೋಶ ಕ್ಯಾನ್ಸರ್…

Read More

ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಸಾಹಿತಿ ಹಾಗೂ ಸಮಾಜಸೇವಕಿ ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ “ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ…

Read More

ಮಲ್ಲಯ್ಯ ಕೋಮಾರಿ ಅವರಿಗೆ ‘ಕನ್ನಡ ಪಯಸ್ವಿನಿ ರಂಗ ರತ್ನ’ ಪ್ರಶಸ್ತಿ

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಘಟನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಮಲ್ಲಯ್ಯ ಶಿವಮೂರ್ತಯ್ಯ ಕೋಮಾರಿ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ “ಕನ್ನಡ ಪಯಸ್ವಿನಿ ರಂಗ ರತ್ನ” ಅಚೀವ್‌ಮೆಂಟ್ ಅವಾರ್ಡ್–2026 ಘೋಷಿಸಲಾಗಿದೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ….

Read More

ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶ: ಕೂಲಿ ಕಾರ್ಮಿಕ ಸಾವು

ಬಂಟ್ವಾಳ | ಜು. 9: ತಾಲೂಕಿನ ಪೆರ್ನೆ ಗ್ರಾಮದ ನೂಜಿನಡ್ಕದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತರನ್ನು ಚಂದಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ನೂಜಿನಡ್ಕ ಪ್ರದೇಶದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮರದ ಗೆಲ್ಲುಗಳನ್ನು ಕತ್ತರಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮರದ ಗೆಲ್ಲು ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಅವರಿಗೆ ತೀವ್ರ ವಿದ್ಯುತ್ ಆಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯನ್ನು…

Read More

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ಹೊರಾಂಗಣ ಮೇಲ್ಛಾವಣಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ | ಜು. 9: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಹೊರಾಂಗಣದ ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ಮೇಲ್ಛಾವಣಿ ಕಾಮಗಾರಿಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಅವರು ಪೂಜಾ ವಿಧಿ ನೆರವೇರಿಸಿದರು. ಬಳಿಕ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆದಿದ್ದು, ಇದೀಗ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿವೆ. ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮೇಲೂ…

Read More
error: Content is protected !!