17 ವರ್ಷಗಳಿಂದ ಅಕ್ರಮ ಸ್ಫೋಟಕ ಬಳಕೆ ಆರೋಪ: ಪಲ್ಲಮಜಲು ಕಲ್ಲುಕೋರೆಗೆ ಗಣಿ ಇಲಾಖೆ ಮರು ಪರಿಶೀಲನೆ
ಬಂಟ್ವಾಳ | ಜು. 9: ತಾಲೂಕಿನ ಬಿ.ಮೂಡ ಗ್ರಾಮದ ಪಲ್ಲಮಜಲು ಪ್ರದೇಶದಲ್ಲಿರುವ ಕಲ್ಲುಕೋರೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿದರು. ಹೋರಾಟಗಾರರು ಸಲ್ಲಿಸಿದ್ದ ಹೊಸ ದೂರಿನ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆದಿದ್ದು, ಗ್ರಾಮಸ್ಥರು ಮತ್ತು ಹೋರಾಟಗಾರರು ಅಧಿಕಾರಿಗಳಿಗೆ ಹಲವು ಅಹವಾಲುಗಳನ್ನು ಸಲ್ಲಿಸಿದರು. ಕಲ್ಲು ಸಿಡಿಸಲು ಅಗತ್ಯ ಅನುಮತಿ ಇಲ್ಲದಿದ್ದರೂ ಕಳೆದ ಸುಮಾರು 17 ವರ್ಷಗಳಿಂದ ಸ್ಫೋಟಕಗಳನ್ನು ಬಳಸಿ ಕಲ್ಲು ಒಡೆದು ಸಾಗಾಟ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದರು. ಈ ಕುರಿತು…
