Headlines

ಆ.2ರಿಂದ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ಶಿಪ್ : ಡಾ. ಅಮರ ಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ರಿ.) ವತಿಯಿಂದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್-2026 ಆಗಸ್ಟ್ 2ರಿಂದ 8ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಅಮರ ಶ್ರೀ ಅಮರನಾಥ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600ಕ್ಕೂ ಅಧಿಕ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆಯಿದ್ದು, ಈ ರಾಷ್ಟ್ರೀಯ…

Read More

ಕೇರಳ ಅವಳಿ ಸುರಂಗ ನಿರ್ಮಾಣ ಕಂಪನಿಗಿದೆ ಕರ್ನಾಟಕದ ನಂಟು

ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ (Wayanad Landslide) ಸಂತ್ರಸ್ತ ಪ್ರದೇಶದಲ್ಲಿ ಅವಳಿ ಸುರಂಗ (Twin Tunnel) ನಿರ್ಮಿಸುತ್ತಿರುವ ದಿಲೀಪ್ ಬಿಲ್ಡ್ ಕಾನ್‌ಗೆ (Dilip Buildcon Limited) ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕೆಲಸಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು. ನಂಟು:ಮೈಸೂರು – ಬೆಂಗಳೂರು ನಡುವಿನ 117 ಕಿ.ಮೀ ಮಾರ್ಗದ ಎಕ್ಸ್‌ಪ್ರೆಸ್‌ ವೇ ಅನ್ನು 8,480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಇದೇ…

Read More

ಜು.12ರಂದು ಜಿಎಸ್‌ಬಿ ಸೇವಾ ಸಂಘದಿಂದ ಕೊಂಕಣಿ ಸಾಹಿತ್ಯ ಸ್ಪರ್ಧೆಗಳು

ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಸಂಘದ ವತಿಯಿಂದ ದಿ. ಮಂದರ್ಕೆ ಮಾಧವ್ ಪೈ ಸ್ಮರಣಾರ್ಥ ‘ಸೋಬಿತ್ ಪಾನ್ಸಾಡಿ’ ಕೊಂಕಣಿ ಸಾಹಿತ್ಯ ಹಾಗೂ ವಿವಿಧ ಸ್ಪರ್ಧೆಗಳು ಜುಲೈ 12ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ನಡೆಯಲಿವೆ. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಎ. ರಮೇಶ್ ಪೈ, ಕೊಂಕಣಿ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡುವ ಹಾಗೂ ವಿವಿಧ ವಯೋಮಾನದ…

Read More

ರಾಮ ಮಂದಿರ ದೇಣಿಗೆ, ಹುಂಡಿ ಕಳವು ಆರೋಪ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವಿನಯಕುಮಾರ್ ಸೊರಕೆ ಆಗ್ರಹ

ಉಡುಪಿ | ಜು. 9: ರಾಮ ಮಂದಿರದ ದೇಣಿಗೆ, ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು. ಉಡುಪಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರನ್ನು ಬಳಸಿಕೊಂಡು ಬಿಜೆಪಿ ಚುನಾವಣೆಗಳನ್ನು ಎದುರಿಸಿದ್ದು, ಮನೆ ಮನೆಗೆ ಇಟ್ಟಿಗೆ ನೀಡಿ ಪೂಜೆ ಮಾಡಿಸಿ ಮತ ಯಾಚನೆ ನಡೆಸಲಾಗಿತ್ತು ಎಂದು ಆರೋಪಿಸಿದರು. ರಾಮ ಮಂದಿರಕ್ಕಾಗಿ ದಶಕಗಳಿಂದ…

Read More

ಆಗುಂಬೆಯಲ್ಲಿ ಮೊದಲ ಬಾರಿಗೆ ಅಪರೂಪದ ‘ಕನಿ ಮರಏಡಿ’ ಪತ್ತೆ

ಉಡುಪಿ, ಜು. 9: ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ಎಂದು ಗುರುತಿಸಲ್ಪಟ್ಟಿರುವ ಅಪರೂಪದ ‘ಕನಿ ಮರನಂಡು’ (Kani Maranjandu) ಮೊದಲ ಬಾರಿಗೆ ಆಗುಂಬೆಯಲ್ಲಿ ಪತ್ತೆಯಾಗಿದ್ದು, ಪಶ್ಚಿಮ ಘಟ್ಟದ ಜೀವವೈವಿಧ್ಯ ಅಧ್ಯಯನದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಇದುವರೆಗೆ ಈ ಅಪರೂಪದ ಏಡಿ ಕೇವಲ ಕೇರಳದ ಆಗಸ್ತ್ಯಮಲೆ ಜೈವಿಕ ವಲಯದಲ್ಲಿ ಮಾತ್ರ ದಾಖಲಾಗಿತ್ತು. ಇದೀಗ ಸುಮಾರು 566 ಕಿ.ಮೀ. ದೂರದಲ್ಲಿರುವ ಆಗುಂಬೆಯಲ್ಲಿ ಇದೇ ಪ್ರಭೇದ ಪತ್ತೆಯಾಗಿರುವುದು ಇದರ ವಿತರಣಾ ವ್ಯಾಪ್ತಿಯ ಕುರಿತು ಹೊಸ ಮಾಹಿತಿಯನ್ನು ಒದಗಿಸಿದೆ. ಸಂಶೋಧಕರಾದ…

Read More

ರಿಷಬ್ ಶೆಟ್ಟಿ ಹುಟ್ಟುಹಬ್ಬ: ಅಭಯ ಆಶ್ರಮದ 90 ಮಂದಿಗೆ ಅನ್ನದಾನ

ಮಂಗಳೂರು | ಜು. 9: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ರಿಷಬ್ ಶೆಟ್ಟಿ ಫ್ಯಾನ್ಸ್ ಕುಡ್ಲ ವತಿಯಿಂದ ಸಮಾಜಮುಖಿ ಕಾರ್ಯಕ್ರಮವೊಂದು ನಡೆಯಿತು. ಕದ್ರಿ ಇವೆಂಟ್ಸ್‌ನ ಮಾಲಕರಾದ ಜಗದೀಶ್ ಕದ್ರಿ ಅವರ ಮುಂದಾಳತ್ವದಲ್ಲಿ, ಕೊಣಾಜೆ ಸಮೀಪದ ಅಸೈಗೋಳಿಯಲ್ಲಿರುವ ಅಭಯ ಆಶ್ರಮದ 90 ಮಂದಿ ಆಶ್ರಮವಾಸಿಗಳಿಗೆ ಅನ್ನದಾನದ ವ್ಯವಸ್ಥೆ ಮಾಡಲಾಯಿತು. ರಿಷಬ್ ಶೆಟ್ಟಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಆಶ್ರಮವಾಸಿಗಳಿಗೆ ಊಟವನ್ನು ವಿತರಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಕಿಶೋರ್…

Read More

ಕುಂಬಳೆ ಸೇವಾ ಸಹಕಾರಿ ಬ್ಯಾಂಕ್ ವಿರುದ್ಧ ಸಂಘ ಪರಿವಾರ ಕಾರ್ಯಕರ್ತರ ಬ್ಯಾನರ್; ರಾಜಕೀಯ ವಲಯದಲ್ಲಿ ಸಂಚಲನ

ಕುಂಬಳೆ | ಜು. 9: ಬಿಜೆಪಿ ಬೆಂಬಲಿತ ಸಂಘ ಪರಿವಾರ ಪೋಷಿತ ಸಹಕಾರ ಭಾರತಿ ಆಡಳಿತವಿರುವ ಕುಂಬಳೆ ಸೇವಾ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧವೇ ಸಂಘ ಪರಿವಾರದ ಕಾರ್ಯಕರ್ತರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಕುಂಬಳೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕುಂಬಳೆ ಪೇಟೆಯಲ್ಲಿರುವ ಬ್ಯಾಂಕ್ ಕಚೇರಿ ಎದುರು ‘ಬಂಬ್ರಾಣದ ನೊಂದ ಸ್ವಯಂಸೇವಕರು ಹಾಗೂ ಬಿಜೆಪಿ ಕಾರ್ಯಕರ್ತರು’ ಎಂಬ ಹೆಸರಿನಲ್ಲಿ ಅಳವಡಿಸಲಾದ ಬ್ಯಾನರ್ ರಾಜಕೀಯ ಹಾಗೂ ಸಂಘ ಪರಿವಾರ ವಲಯದಲ್ಲಿ ಸಂಚಲನ ಮೂಡಿಸಿದೆ. ಬ್ಯಾನರ್‌ನಲ್ಲಿ ಮಾಡಲಾದ ಆರೋಪಗಳ ಪ್ರಕಾರ,…

Read More

ವಿಳಿಂಜಂ ವಿಚಾರದಲ್ಲಿ ಕಣ್ಣೂರು ಜಿಲ್ಲಾ ಕಾರ್ಯದರ್ಶಿಗೆ ಮಾತ್ರವಲ್ಲ, ಪ್ರತಿಯೊಬ್ಬ ಮಲಯಾಳಿಗೂ ಆಸಕ್ತಿ ಇದೆ’; ಮುಖ್ಯಮಂತ್ರಿಗೆ ಕೆ.ಕೆ. ರಾಗೇಶ್ ತಿರುಗೇಟು

ವಿಳಿಂಜಂ ಬಂದರು ವಿಷಯದಲ್ಲಿ ಪ್ರತಿಯೊಬ್ಬ ಮಲಯಾಳಿಗೂ ಆಸಕ್ತಿ ಇದೆ ಎಂದು ಸಿಪಿಐ(ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಕೆ.ಕೆ. ರಾಗೇಶ್ ಹೇಳಿದ್ದಾರೆ. “ವಿಳಿಂಜಂ ವಿಷಯದಲ್ಲಿ ಕಣ್ಣೂರು ಜಿಲ್ಲಾ ಕಾರ್ಯದರ್ಶಿಗೆ ಏನು ಸಂಬಂಧ?” ಎಂಬ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಪ್ರಶ್ನೆಗೆ ಅವರು ಈ ಮೂಲಕ ಪ್ರತಿಕ್ರಿಯಿಸಿದ್ದಾರೆ. “ವಿಳಿಂಜಂ ವಿಚಾರದಲ್ಲಿ ಕಣ್ಣೂರು ಜಿಲ್ಲಾ ಕಾರ್ಯದರ್ಶಿಗೆ ಮಾತ್ರವಲ್ಲ, ಪ್ರತಿಯೊಬ್ಬ ಮಲಯಾಳಿಗೂ ಕಾಳಜಿ ಇದೆ. ಇದು ಪ್ರಜಾಪ್ರಭುತ್ವದ ಜವಾಬ್ದಾರಿಯೂ ಆಗಿದೆ. ಸಾರ್ವಜನಿಕ ಆಸ್ತಿಯನ್ನು ಕಾಪಾಡುವ ಜಾಗೃತಿಯೂ ಆಗಿದೆ” ಎಂದು ಅವರು ಹೇಳಿದರು. “ವಿಳಿಂಜಂ…

Read More

ಯಕ್ಷನಂದನ 45ನೇ ವರ್ಷಾಚರಣೆ ಜು.10ರಂದು; ಅಪರೂಪದ ಇಂಗ್ಲಿಷ್ ಯಕ್ಷಗಾನ ಪ್ರದರ್ಶನ

ಮಂಗಳೂರು: ಯಕ್ಷಗಾನವನ್ನು ಭಾಷೆಯ ಗಡಿಗಳನ್ನು ಮೀರಿ ಜಾಗತಿಕ ಮಟ್ಟಕ್ಕೆ ಪರಿಚಯಿಸಿದ “ಯಕ್ಷನಂದನ” ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮವು ಜುಲೈ 10ರಂದು ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ “ರಾಮರಮಣ” ಮಂಟಪದಲ್ಲಿ ನಡೆಯಲಿದೆ ಎಂದು ಯಕ್ಷನಂದನದ ಸಂಚಾಲಕ ಪಿ. ಸಂತೋಷ್ ಐತಾಳ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಪಿ.ವಿ. ಐತಾಳರ ತಿಥಿಯ ಅಂಗವಾಗಿ ಮಧ್ಯಾಹ್ನ 2.15ರಿಂದ ಸಂಜೆ 5 ಗಂಟೆಯವರೆಗೆ ಅವರು ರಚಿಸಿದ ‘ನರಕಾಸುರ ಮೋಕ್ಷ’ ಹಾಗೂ ‘ಬ್ರಹ್ಮಕಪಾಲ’ ಪ್ರಸಂಗಗಳ…

Read More

ಪತ್ನಿ ಮನೆ ಬಿಟ್ಟು ಹೋದ ದ್ವೇಷ; ಮಕ್ಕಳಿಗೆ ವಿಷ ನೀಡಿ ಕೊಲ್ಲಲು ಯತ್ನಿಸಿದ ತಂದೆ, 7 ವರ್ಷದ ಮಗಳು ಸಾವು

ತ್ರಿಶೂರ್ ಜಿಲ್ಲೆಯ ಪೆರುಂಬಿಲಾವಿನಲ್ಲಿ ತಂದೆಯೊಬ್ಬ ಮಕ್ಕಳಿಗೆ ವಿಷ ನೀಡಿ ಕೊಲ್ಲಲು ಯತ್ನಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತಮಿಳುನಾಡು ಮೂಲದ ಮುತ್ತು ಅವರ ಪುತ್ರಿ ಋತಿಕಾ (7) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇಲಿ ವಿಷ ಬೆರೆಸಿದ ಜ್ಯೂಸ್ ಸೇವಿಸಿದ್ದರಿಂದ ಆಕೆಯ ಸ್ಥಿತಿ ಗಂಭೀರವಾಗಿತ್ತು. ಋತಿಕಾಳ ಕಿರಿಯ ಸಹೋದರ ಋತಿನ್ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ. ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಆರೋಪಿ ಮುತ್ತು (29) ಅವರನ್ನು ನಿನ್ನೆ ಮತ್ತೆ…

Read More
error: Content is protected !!