ಕೇರಳ ಅವಳಿ ಸುರಂಗ ನಿರ್ಮಾಣ ಕಂಪನಿಗಿದೆ ಕರ್ನಾಟಕದ ನಂಟು
ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ (Wayanad Landslide) ಸಂತ್ರಸ್ತ ಪ್ರದೇಶದಲ್ಲಿ ಅವಳಿ ಸುರಂಗ (Twin Tunnel) ನಿರ್ಮಿಸುತ್ತಿರುವ ದಿಲೀಪ್ ಬಿಲ್ಡ್ ಕಾನ್‌ಗೆ (Dilip Buildcon Limited) ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕೆಲಸಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು. ನಂಟು:ಮೈಸೂರು – ಬೆಂಗಳೂರು ನಡುವಿನ 117 ಕಿ.ಮೀ ಮಾರ್ಗದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಇದೇ…
