ದ.ಕ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಕಾರ್ಯಪಡೆ ವ್ಯಾಪಕ . ಶಾಸಕ ವೇದವ್ಯಾಸ ಕಾಮತ್ ಆರೋಪ.
ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆಯಾಗಿ ಕಾರ್ಯನಿರ್ವಹಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಕರಾವಳಿ ಭಾಗದಲ್ಲಿ ಗೋಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಅತೀ ಹೆಚ್ಚು ಶಿಕ್ಷಣ ಸಂಸ್ಥೆಯಿರುವ ಮಂಗಳೂರು, ಕೇರಳದ ಗಡಿಭಾಗವಾದ್ದರಿಂದ ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ. ಇವುಗಳೇ ಇಲ್ಲಿನ…
