ಕಡಬ ಪಟ್ಟಣ ಪಂಚಾಯಿತಿ ಚುನಾವಣೆ;ನೀತಿ ಸಂಹಿತೆ ಜಾರಿಚುನಾವಣಾದಿಕಾರಿಗಳ ನೇಮಕ;ರಾಜಕೀಯ ಪಕ್ಷಗಳ ಪ್ರಮುಖರ ಸಭೆ
ಕಡಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಅದಿಸೂಚನೆ ಪ್ರಕಟವಾಗಿದ್ದು, ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರದಿoದಲೇ (ಜು. ೨೯ ) ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಮಂಗಳವಾರ ಸಂಜೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರ…
