ಹಿರಿಯ ರಂಗ ಭೂಮಿ ಕಲಾವಿದ ರಮೇಶ್ ಕಲ್ಲಡ್ಕ ಇನ್ನಿಲ್ಲ
ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಪುತ್ರ, ಪುತ್ರಿಯನ್ನು ಹೊಂದಿದ್ದರು. ರಂಗಭೂಮಿಯಲ್ಲಿ 30 ವರ್ಷಕ್ಕೂ ಮಿಕ್ಕಿ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ…
