ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ
ಮಂಗಳೂರು: ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗೆ ಯೆಯ್ಯಾಡಿಯ ಕಾಂಪ್ಲೆಕ್ಸ್ ವೊಂದರ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ ಬೈಕ್ ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ದಿನಾಂಕ : 16-12-2025 ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ @ ತೋಟ ಪೈಸಲ್ ಹಾಗೂ ನಿತೀನ್ ಕುಮಾರ್ ಮೈಸೂರು ಇವರನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರಿಸಲಾಯ್ತು….
