ಕರ್ನಲ್ ಸೋಫಿಯಾ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ: ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲಿ ಎಫ್ ಐ ಆರ್?
ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಳಗಾವಿ ಎಸ್‌ಪಿಗೆ ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ಇದು ಕರ್ನಲ್ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೇನಾ ಮಾಹಿತಿಯನ್ನು ಹಂಚಿಕೊಂಡಿದ್ದ ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ…
