ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೇರಿ ಎಲ್ಲಾ ಸಚಿವರು ಮತ್ತು ಶಾಸಕರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಹಾಳುಗೆಡವುತ್ತಿರುವುದರ ವಿರುದ್ಧ ಧಿಕ್ಕಾರ ಕೂಗಿ…

Read More

ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬೆಂಗಳೂರಿನ ಪಬ್ ಮೇಲೆ ಐಟಿ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದೆ.ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಮುಂಬೈ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ. ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ಐಟಿ ದಾಳಿಯು ಆ ಹಿಂದಿನ…

Read More

ಕಜಂಬು ಜಾತ್ರೋತ್ಸವ ಸಂಪನ್ನ ಹತ್ತೂರುಗಳ ಸಹಸ್ರಾರು ಶಿಶುಗಳನ್ನು ಹರಕೆ ರೂಪದಲ್ಲಿ ಸಮರ್ಪಣೆ… !

ವಿಟ್ಲ:ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು.ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು ಹರಕೆಗೆ ಚಾಲನೆ ನೀಡಲಾಯಿತು. ಹರಕೆ ಸಲ್ಲಿಸಲ್ಪಡುವ ಮಕ್ಕಳನ್ನು ಜಳಕದ…

Read More

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಮೀಸೆ ರವೂಫ್ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಮಂಜೇಶ್ವರ ತಾಲೂಕು ಉಪ್ಪಳದ 48 ವರ್ಷದ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 19 ಪ್ರಕರಣಗಳು ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ. ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ಬಂಧನ…

Read More

ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಅಧಿಕ ಭಕ್ತರು ಶಬರಿಮಲೆ ಭೇಟಿ; ದಿನಕ್ಕೆ 4 ಲಕ್ಷ ಟಿನ್ ಅರವಣ ಪಾಯಸ ಮಾರಾಟ!

ಶಬರಿಮಲೆ:ಮಂಡಲ ತೀರ್ಥಯಾತ್ರೆ ಆರಂಭವಾದ ಬಳಿಕ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಅಧಿಕ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ.ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ. ಸಾಂಪ್ರದಾಯಿಕ ಅರಣ್ಯ ಮಾರ್ಗದ ಮೂಲಕ 1 ಲಕ್ಷಕ್ಕೂ ಹೆಚ್ಚು ಭಕ್ತರು ಸನ್ನಿಧಾನಕ್ಕೆ ಆಗಮಿಸಿದ್ದಾರೆ. ಶಬರಿಮಲೆಯ ಸನ್ನಿಧಾನ, ಪಂವಾ, ನಿಲಕ್ಕಲ್ ಪ್ರದೇಶಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಮಲೆ ಏರುವ ಮೊದಲು ಭಕ್ತರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಎಸ್ .ಪ್ರೇಮ್ ಕೃಷ್ಣನ್ ತಿಳಿಸಿದ್ದಾರೆ. ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು…

Read More

ಹೃದಯಾಘಾತದಿಂದ 22 ವರ್ಷದ ಯುವತಿ ಕೊನೆಯುಸಿರು …. !

ಶೃಂಗೇರಿ:ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ.ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಯಾದ ದಿಶಾ (22) ಎಂದು ಗುರುತಿಸಲಾಗಿದೆ. ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದರು. ಇಂದು (ಡಿ.17) ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದ ವೇಳೆ ದಿಶಾ ಅವರಿಗೆ ಅಚಾನಕ್ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಕ್ರಮ ಕೈಗೊಳ್ಳಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ಹೇಳಲಾಗಿದೆ.ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಹೆತ್ತವರ…

Read More

ಡಿ 20 ರಂದು ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಅಡ್ಯಾರು ಗ್ರಾಮೋತ್ಸವ…. !

ಮಂಗಳೂರು: ಅಡ್ಯಾರು ಗ್ರಾಮ ಪಂಚಾಯತ್ ಪ್ರಕೃತಿ ಸಂಜೀವಿನಿ ಒಕ್ಕೂಟ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಇವರ ಸಂಯುಕ್ತ ಆಶ್ರಯದಲ್ಲಿ ಅಡ್ಯಾರು ಗ್ರಾಮೋತ್ಸವ ಕಾರ್ಯಕ್ರಮವು ಡಿ 20 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ತಿಳಿಸಿದರು . ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? ಡಿವೈಎಫ್ ಐ ಪ್ರಶ್ನೆ

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯಿಂದಾಗಿ ದಿನೇ ದಿನೇ ಸಮಸ್ಯೆಗಳು ಎದುರಾಗುತ್ತಿದ್ದು, ಯಾವ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಇದರತ್ತ ಗಮನಹರಿಸದಿರುವುದು ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿ ಆಪಾದಿಸಿದೆ. ಈ ರಸ್ತೆಯ ಮರುಡಾಮರೀಕರಣಕ್ಕೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಿ ಡಿ.ವೈ.ಎಫ್.ಐ. ಡಿ.ವೈ.ಎಫ್.ಐ. ಈ ಹೇಳಿಕೆ ನೀಡಿದ್ದಾಗಿದೆ. ಇಲ್ಲಿನ ರಸ್ತೆ ಹೊಂಡ-ಗುಂಡಿಗಳನ್ನು ಒಳಗೊಂಡು ಮರಣ ಬಾವಿಯಂತೆ ಬಾಯಿ ಬಿಡುತ್ತಿದೆ ಎಂದು ಆಪಾದಿಸಿದ ಡಿ.ವೈ.ಎಫ್.ಐ. ತಾಲೂಕು ಅದ್ಯಕ್ಷರಾದ ಅಧಿತಿ ಕೊಯ್ಯೂರು ಹಾಗೂ ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಅವರು…

Read More

ನಾಳೆ ಮಹಾನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಡಿಸೆಂಬರ್ 18 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220318 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಮಂಗಳೂರು:- ಮಂಗಳೂರು ಪ್ರೆಸ್‍ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಅಧಿಕ ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ. ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರ, ಅಂಕ ಪಟ್ಟಿಯ ಪ್ರತಿಯ ದಾಖಲೆ, ಬ್ಯಾಂಕ್ ಪಾಸ್ ಪುಸ್ತಕದ ವಿವರ ಸಹಿತ ಪ್ರಧಾನ…

Read More
error: Content is protected !!