ಜು. 6ರಂದು ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಎಚ್ಚರಿಕೆ ಮುಷ್ಕರ

ಕಾಸರಗೋಡು, ಜು. 4: ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್‌ಗಳ ಆದಾಯದಲ್ಲಿ ಗಣನೀಯ ಕುಸಿತ ಉಂಟಾಗಿದ್ದು, ನಷ್ಟದಲ್ಲಿರುವ ಖಾಸಗಿ ಬಸ್ ಉದ್ಯಮವನ್ನು ರಕ್ಷಿಸುವಂತೆ ಆಗ್ರಹಿಸಿ ಜುಲೈ 6ರಂದು (ಸೋಮವಾರ) ಜಿಲ್ಲೆಯಾದ್ಯಂತ ಒಂದು ದಿನದ ಎಚ್ಚರಿಕೆ ಮುಷ್ಕರ ನಡೆಸಲು ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಷನ್ ತೀರ್ಮಾನಿಸಿದೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ಪದಾಧಿಕಾರಿಗಳು, ಕೆಎಸ್‌ಆರ್‌ಟಿಸಿ ಸಂಚರಿಸುವ ಮಾರ್ಗಗಳಲ್ಲಿ ಓಡಾಡುವ ಖಾಸಗಿ ಬಸ್‌ಗಳಿಗೆ ಡೀಸೆಲ್ ವೆಚ್ಚ ಭರಿಸುವಷ್ಟು ಆದಾಯವೂ ದೊರೆಯುತ್ತಿಲ್ಲ. ಇತರ…

Read More

ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ದಾಳಿ: ಯಂತ್ರೋಪಕರಣ, ವೇ-ಬ್ರಿಡ್ಜ್ ವಶ

ಬಂಟ್ವಾಳ, ಜು. 4: ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ವಾಹನಗಳು, ಯಂತ್ರೋಪಕರಣಗಳು ಹಾಗೂ ವೇ-ಬ್ರಿಡ್ಜ್‌ನ್ನು ವಶಪಡಿಸಿಕೊಂಡಿದೆ. ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ…

Read More

ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ: ಹಲವು ಪ್ರಕರಣಗಳ ಆರೋಪಿಗೆ ಸೈಬರ್ ಪೊಲೀಸರ ಬಲೆ

ಬಂಟ್ವಾಳ, ಜು. 4: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಸೈಬರ್…

Read More

ಕುದ್ಮುಲ್ ರಂಗರಾವ್ ಜಯಂತಿ ಜು.5ರಂದು: ಉಚಿತ ಕಾಲೇಜು ಬ್ಯಾಗ್ ವಿತರಣೆ

ಮಂಗಳೂರು, ಜು. 4: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ ಹಾಗೂ ದಲಿತೋದ್ಧಾರದ ಮುಂಚೂಣಿ ನಾಯಕರಾದ ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ಜುಲೈ 5ರಂದು (ಭಾನುವಾರ) ಬೆಳಿಗ್ಗೆ 10.30ಕ್ಕೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕಾಲೇಜು ಬ್ಯಾಗ್‌ಗಳನ್ನು ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ…

Read More

ಬೋಳೂರು ಶ್ರೀ ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್‌ಗೆ ಶಾಸಕ ವೇದವ್ಯಾಸ ಕಾಮತ್ ಮನವಿ

ಮಂಗಳೂರು, ಜು. 4: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪ್ರದೇಶದಲ್ಲಿ ಹಲವು ದಶಕಗಳಿಂದ ಸ್ಥಳೀಯರನ್ನು ಕಾಡುತ್ತಿರುವ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಟಿ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಸುಮಾರು 75 ವರ್ಷಗಳಿಂದ ಈ ಪ್ರದೇಶದಲ್ಲಿ ಸಮರ್ಪಕ ಡ್ರೈನೇಜ್ ವ್ಯವಸ್ಥೆ ಇಲ್ಲದಿರುವುದು ಸ್ಥಳೀಯರ ಪ್ರಮುಖ ಸಮಸ್ಯೆಯಾಗಿದ್ದು, ಈ ಹಿಂದೆ ಕುಡ್ಸೆಂಪ್ ವತಿಯಿಂದ ಅಗತ್ಯ…

Read More

11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಬಂಧನ

ಕಾಸರಗೋಡು : ಪರಿಯಾರಂನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಇ.ವಿ. ಗೋಪಿನಾಥನ್ (62) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.​ಘಟನೆಯ ನಂತರ ಬಾಲಕಿ ದೈಹಿಕ ಅಸ್ವಸ್ಥತೆಯಿಂದ ನರಳುತ್ತಿದ್ದುದನ್ನು ಗಮನಿಸಿದ ತಾಯಿ, ವಿಚಾರಿಸಿದಾಗ ಕರಾಳ ಸತ್ಯ ಬಯಲಾಗಿದೆ. ಕೂಡಲೇ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಯಾರಂ ಠಾಣಾಧಿಕಾರಿಗಳು ಪೋಕ್ಸೋ…

Read More

ಮಂಜೇಶ್ವರದಲ್ಲಿ ಕುಸಿದ ಹೆಂಚಿನ ಮನೆ: ಕೂದಲೆಳೆಯ ಅಂತರದಲ್ಲಿ ಬದುಕುಳಿದ ಕುಟುಂಬ

​ಮಂಜೇಶ್ವರ : ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪವಿರುವ ವೇದಾವತಿ ಎಂಬವರ ಮನೆ ಹಠಾತ್ತಾಗಿ ಕುಸಿದುಬಿದ್ದಿದೆ. ತೀವ್ರ ಶಬ್ದ ಕೇಳಿ ಎಚ್ಚೆತ್ತ ಕುಟುಂಬದವರು ತಕ್ಷಣ ಮನೆಯಿಂದ ಹೊರಗೆ ಓಡಿಬಂದಿದ್ದರಿಂದ, ಸಂಭವಿಸಬಹುದಾಗಿದ್ದ ಭೀಕರ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ​ಮನೆ ಕುಸಿದ ಪರಿಣಾಮ ಹೆಂಚಿನ ಛಾವಣಿ ಸಂಪೂರ್ಣವಾಗಿ ನೆಲಕಚ್ಚಿದ್ದು, ಮನೆಯಲ್ಲಿದ್ದ ವಸ್ತುಗಳಿಗೆ ತೀವ್ರ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡ ಹರಿಶ್ಚಂದ್ರ ಮಂಜೇಶ್ವರ, ಸ್ಥಳೀಯ ವಾರ್ಡ್ ಸದಸ್ಯೆ ಹರಿಣಾಕ್ಷಿ ಮತ್ತು ಕಲ್ಕಿ ಮಂಜೇಶ್ವರದ ಅರುಣ್ ದುರ್ಗಿಪಳ್ಳ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ…

Read More

ಬೀದಿಬದಿ ವ್ಯಾಪಾರಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ: ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ

ಮಂಗಳೂರು, ಜು.3: ನಗರಪಾಲಿಕೆಯ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾಗಿರುವ ಮಂಗಳೂರು ನಗರದ ಸಂಡೆ ಬಜಾರ್ ಸೇರಿದಂತೆ ವಿವಿಧ ಪ್ರದೇಶಗಳ ಬೀದಿಬದಿ ವ್ಯಾಪಾರಿಗಳು ಗುರುವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಬೀದಿಬದಿ ವ್ಯಾಪಾರವೇ ತಮ್ಮ ಜೀವನೋಪಾಯವಾಗಿದ್ದು, ಕುಟುಂಬದ ನಿರ್ವಹಣೆಗೆ ಇದನ್ನೇ ಅವಲಂಬಿಸಿರುವುದರಿಂದ ಬದುಕುವ ಹಕ್ಕನ್ನು ರಕ್ಷಿಸಿ, ವ್ಯಾಪಾರಕ್ಕೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ವ್ಯಾಪಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಅಹವಾಲು ಆಲಿಸಿದ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಘದ ಪ್ರತಿನಿಧಿಗಳು ಸೂಚಿಸುವ ಮೂರು…

Read More

ಬಲ್ಲೂರುಗುಡ್ಡೆಯಲ್ಲಿ ಗುಡ್ಡೆ ಕುಸಿತದ ಭೀತಿ: ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಆಗ್ರಹ

ಮಂಗಳೂರು, ಜು.3: ಮಂಗಳೂರು ಮಹಾನಗರ ಪಾಲಿಕೆಯ 52ನೇ ವಾರ್ಡ್ ವ್ಯಾಪ್ತಿಯ ಬಲ್ಲೂರುಗುಡ್ಡೆ ಪ್ರದೇಶದಲ್ಲಿ ಕಳೆದ 15 ವರ್ಷಗಳಿಂದ ಗುಡ್ಡೆ ಕುಸಿತದ ಸಮಸ್ಯೆ ಮುಂದುವರಿದಿದ್ದು, ಈ ಬಾರಿಯ ಮಳೆಗಾಲದಲ್ಲಿ ಸ್ಥಳೀಯರು ಆತಂಕದ ನಡುವೆ ಜೀವನ ಸಾಗಿಸುವಂತಾಗಿದೆ. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕರ ಗಮನಕ್ಕೆ ತಂದಿದ್ದರೂ, ಶಾಶ್ವತ ಪರಿಹಾರ ಕಾಮಗಾರಿಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡೆ ಕುಸಿತದಿಂದ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸುವ ಮುನ್ನವೇ ಜಿಲ್ಲಾಡಳಿತ,…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಲುಗಡೆ ತಾಣ ಬಳಕೆಗೆ ನಿರ್ಲಕ್ಷ್ಯ: ಅಪಘಾತ ಭೀತಿ, ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಮುಖ್ಯ ರಸ್ತೆಯಲ್ಲೇ ಬಸ್ ನಿಲುಗಡೆ; ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ಬಂಟ್ವಾಳ, ಜು.3: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ನಿರ್ಮಿಸಲಾದ ಬಸ್ ಬೇಗಳನ್ನು ಬಳಸದೆ, ಹೆದ್ದಾರಿಯ ಮುಖ್ಯ ಮಾರ್ಗದಲ್ಲೇ ಬಸ್‌ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿ-ಇಳಿಸುವ ಪದ್ಧತಿ ಮುಂದುವರಿದಿದ್ದು, ಇದು ಅಪಘಾತಗಳಿಗೆ ಕಾರಣವಾಗುವ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಬಿಸಿರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳ ಬಹುಪಾಲು ನಿಗದಿತ ಬಸ್ ಬೇಗಳಿಗೆ ತೆರಳದೆ ಮುಖ್ಯ ರಸ್ತೆಯಲ್ಲೇ ಕೆಲ ಕ್ಷಣಗಳ ಕಾಲ ನಿಲ್ಲಿಸುತ್ತಿವೆ ಎಂಬ ಆರೋಪ…

Read More
error: Content is protected !!