ಗೋಹತ್ಯೆ ನಿಷೇಧ ಕಾನೂನು ದುರ್ಬಲಗೊಳಿಸಲು ಕಾಂಗ್ರೆಸ್ ಸರಕಾರ ಯತ್ನ- ವಿಶ್ವ ಹಿಂದೂ ಪರಿಷತ್ ಆರೋಪ
ಉಡುಪಿ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲಗೊಳಿಸಲು ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಉಡುಪಿ ಜಟ್ಕಾ ಬಸ್ ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿದರು. ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ದಿಕ್ಕಾರ ಕೂಗಿದರು. ವಿಎಚ್ ಪಿ ಕರ್ನಾಟಕ ದಕ್ಷಿಣ…