ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ; ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್‌ಗೆ ಯೆಲ್ಲೋ ಅಲರ್ಟ್
ಭೂಕುಸಿತ, ಪ್ರವಾಹದ ಎಚ್ಚರಿಕೆ; ಅನಗತ್ಯ ಪ್ರಯಾಣ ತಪ್ಪಿಸುವಂತೆ ಹವಾಮಾನ ಇಲಾಖೆ ಸಲಹೆ ತಿರುವನಂತಪುರಂ, ಜು. 2: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಮುಂದುವರಿಸಿದೆ. ಇಂದು ಕಾಸರಗೋಡು, ಕಣ್ಣೂರು ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ನಿರಂತರ ಮಳೆಯ ಪರಿಣಾಮ ಭೂಕುಸಿತ, ಮಣ್ಣಿನ…
