ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಭಾಷಣದ ವಿರುದ್ಧ ರಾಜ್ಯಪಾಲರಿಗೆ ದೂರು; ಸಾಂವಿಧಾನಿಕ ಕ್ರಮಕ್ಕೆ ಆಗ್ರಹ

ರುವನಂತಪುರಂ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಕಣ್ಣೂರು ಭಾಷಣದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜಕೀಯ ದ್ವೇಷ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿರುವುದು ಪ್ರಮಾಣವಚನದ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮುಖ್ಯಮಂತ್ರಿಯ ವಿರುದ್ಧ ಸಾಂವಿಧಾನಿಕ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಹೈಕೋರ್ಟ್ ವಕೀಲ ಪಿ.ಎಂ. ಶಮೀರ್ ಅವರು ಈ ದೂರು ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಎಸ್‌ಎಫ್‌ಐ ಒತ್ತಾಯಿಸಿತ್ತು. ಕಣ್ಣೂರಿನಲ್ಲಿ ನಡೆದ ಯುವ ಕಾಂಗ್ರೆಸ್ ಪಾದಯಾತ್ರೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಮುಖ್ಯಮಂತ್ರಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಗಳನ್ನು ಪ್ರಸ್ತಾಪಿಸಿದ ಅವರು, “ನಾವು ಯಾವುದನ್ನೂ ಮರೆತಿಲ್ಲ, ರಕ್ತಕ್ಕೆ ಪ್ರತಿಯಾಗಿ ಲೆಕ್ಕ ಚುಕ್ತಾ ಮಾಡುತ್ತೇವೆ” ಎಂಬರ್ಥದ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಟಿ.ಐ. ಮಧುಸೂದನನ್ ಅವರ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಮುಖ್ಯಮಂತ್ರಿಯವರ ‘ರಕ್ತಕ್ಕೆ ಪ್ರತಿಯಾಗಿ ಲೆಕ್ಕ ಚುಕ್ತಾ ಮಾಡುತ್ತೇವೆ’ ಎಂಬ ಹೇಳಿಕೆಗೆ ಸಿಪಿಎಂ ನಾಯಕ ಕೆ.ಕೆ. ರಾಗೇಶ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!