ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಅಂಡರ್ -19 ತಂಡದ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 17 ವರ್ಷದ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಆಯ್ಕೆ ಆಗಿದ್ದಾರೆ. ಜತೆಗೆ IPL 2025ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ (RR) ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೂನ್ 24 ರಿಂದ ಜುಲೈ 23 ರವರೆಗೆ ಇಂಗ್ಲೆಂಡ್ ಪ್ರವಾಸ ನಡೆಯಲಿದೆ. ಇದರಲ್ಲಿ 50 ಓವರ್‌ಗಳ ಅಭ್ಯಾಸ ಪಂದ್ಯ, ಐದು ಯೂತ್ ODI ಸರಣಿ ಮತ್ತು ಇಂಗ್ಲೆಂಡ್ U-19 ವಿರುದ್ಧ ಎರಡು ಪಂದ್ಯಗಳು ಇವೆ.
ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಅಂಡರ್ -19 ತಂಡದ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 17 ವರ್ಷದ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಆಯ್ಕೆ ಆಗಿದ್ದಾರೆ. ಜತೆಗೆ IPL 2025ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ (RR) ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಜೂನ್ 24 ರಿಂದ ಜುಲೈ 23 ರವರೆಗೆ ಇಂಗ್ಲೆಂಡ್ ಪ್ರವಾಸ ನಡೆಯಲಿದೆ. ಇದರಲ್ಲಿ 50 ಓವರ್‌ಗಳ ಅಭ್ಯಾಸ ಪಂದ್ಯ, ಐದು ಯೂತ್ ODI ಸರಣಿ ಮತ್ತು ಇಂಗ್ಲೆಂಡ್ U-19 ವಿರುದ್ಧ ಎರಡು ಪಂದ್ಯಗಳು ಇವೆ. ಜೂನಿಯರ್ ಕ್ರಿಕೆಟ್ ಸಮಿತಿ ತಂಡವನ್ನು ಆಯ್ಕೆ ಮಾಡಿದೆ.
ಭಾರತದ U-19 ತಂಡದಲ್ಲಿ ಯಾರ್ಯಾರಿಗೆ ಸ್ಥಾನ?
ಆಯುಷ್ ಮ್ಹಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರ, ಮೌಲ್ಯರಾಜ್‌ಸಿನ್ಹ್ ಚಾವ್ಡಾ, ರಾಹುಲ್ ಕುಮಾರ್, ಅಭಿಜ್ಞಾನ್ ಕುಂಡು (ಉಪನಾಯಕ ಮತ್ತು ವಿಕೆಟ್ ಕೀಪರ್), ಹರ್ವಾಂಶ್ ಸಿಂಗ್ (ವಿಕೆಟ್ ಕೀಪರ್), ಆರ್.ಎಸ್. ಅಂಬರೀಶ್, ಕನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಹೆನಿಲ್ ಪಟೇಲ್, ಯುಧಾಜಿತ್ ಗುಹಾ, ಪ್ರಣವ್ ರಾಘವೇಂದ್ರ, ಮೊಹಮ್ಮದ್ ಎನಾನ್, ಆದಿತ್ಯ ರಾಣಾ, ಅನ್ಮೋಲ್‌ಜೀತ್ ಸಿಂಗ್.