ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಜಯದ ನಗೆ ಬೀರಿದೆ. 2025ರಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡು ತವರಿನ ಅಭಿಮಾನಿಗಳ ಮುಂದೆ ನಿರಾಶೆಯನುಭವಿಸಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ರನ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ 12 ಎಸೆತಗಳಲ್ಲಿ ರಾಜಸ್ಥಾನ್ ತಂಡಕ್ಕೆ ಗೆಲ್ಲಲು 18 ರನ್ಗಳ ಅಗತ್ಯವಿತ್ತು. ಆದರೆ ಜೋಸ್ ಹ್ಯಾಜಲ್ ವುಡ್ 19ನೇ ಓವರ್ನಲ್ಲಿ ಕೇವಲ 1 ರನ್ ನೀಡಿ ಪಂದ್ಯದ ಗತಿಯನ್ನೇ ಬದಲಿಸಿದರು. ಕೊನೆಯ ಓವರ್ನಲ್ಲಿ ಯಶಸ್ ದಯಾಳ್ ಕೇವಲ 5 ರನ್ ನೀಡಿ ಆರ್ಸಿಬಿಗೆ 11 ರನ್ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಆರ್ಸಿಬಿ ಅಂಕಪಟ್ಟಿ 12 ಅಂಕಗಳೊಂದಿಗೆ 3ನೇ ಸ್ಥಾನಕ್ಕೇರಿದೆ.