ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ ರಾಷ್ಟ್ರಗಳ ನಡುವಿನ ಗಡಿಯಲ್ಲಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿದ್ದ ಐಪಿಎಲ್ 2025ರ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.