ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಹಾಗೂ ಇವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ಕೋರ್ಟ್ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಆದೇಶವನ್ನು ಅವರು ಉಲ್ಲಂಘಿಸಿದದ್ದು ಈ ಬಗ್ಗೆ ಧರ್ಮಸ್ಥಳ ಪರವಾಗಿ ಶೀನಪ್ಪ ಅವರು ದೂರು ನೀಡಿದ್ದರು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡ ಅವರಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.