ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಅಮಾನತುಗೊಂಡಿರುವ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. 2018ರಿಂದ 2023ರ ಅವಧಿಯಲ್ಲಿ ಈ ಘಟನೆಗಳು ನಡೆದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಕಾರ, ಆರೋಪಿಯಾಗಿರುವ ಸಂದೇಶ್ ಪಿ.ಜಿ ಅವರು ಈ ಅವಧಿಯಲ್ಲಿ ಶಿಕ್ಷಕಿಯ ಮನೆಗೆ ತೆರಳಿ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ. 2020ರಲ್ಲಿ ಅವರು ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯ ವೇಣೂರು ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿನ್ನೆಲೆ, ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(a)(1), 376(2)(n), 384 ಮತ್ತು 506ರಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಪ್ರಕರಣದಿಂದ ಈಗಾಗಲೇ ಅಮಾನತುಗೊಂಡಿರುವ ಇನ್ಸ್‌ಪೆಕ್ಟರ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.