ಮಂಗಳೂರು: 2021 ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಜು @ ವಿಜಯ್, ಬಂಧಿತ ಆರೋಪಿ. ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ನ್ಯಾಯಾಲಯದಿಂದ NBW ವಾರಂಟ್ ಜಾರಿಯಾಗಿತ್ತು.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಪ್ರಕರಣಗಳು, ದರೋಡೆಗೆ ಸಂಚು ಪ್ರಕರಣಗಳು ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2021 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಕಾವೂರು ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ವಿವಿಧ ಕೇಸ್ ಗಳು ದಾಖಲಾಗಿದ್ದವು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.