ಸಂತಡ್ಕ ಮಾಡದಲ್ಲಿ ಜೂನ್ 7ರಂದು ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವ

ಶ್ರೀ ಅರಸು ಸಕಲ ದೈವ ಕ್ಷೇತ್ರ ಸಂತಡ್ಕ ಮಾಡದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಭಕ್ತರ ಅಭೀಷ್ಟಾರ್ಥ ಸಿದ್ಧಿಗಾಗಿ ಹಾಗು ಭೋಜನ ಶಾಲೆಯ ಉದ್ಘಾಟನೆಯ ಅಂಗವಾಗಿ ಜೂನ್ 7ರಂದು ಅತೀ ಮಹತ್ವದ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ.ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಡಾ. ಶ್ರೀಧರ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನರಸಿಂಹ ತಂತ್ರಿಗಳು ಕುಡುಪು ಹಾಗೂ ಯೋಗೀಶ್ ಕಲ್ಯಾಣತ್ತಾಯ ಕೂಳೂರು ಅವರ ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಅನಂತನಾರಾಯಣ ಭಟ್ಟ ಪರಕಜೆ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.

ಈ ಪುಣ್ಯಕಾರ್ಯದಲ್ಲಿ ಭಕ್ತರು ಕುಟುಂಬ ಸಮೇತರಾಗಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರ ಆಡಳಿತ ಮಂಡಳಿ ಮನವಿ ಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!