ಬದಿಯಡ್ಕ : ಇಲ್ಲಿಗೆ ಸಮೀಪದ ಪಟ್ಟಾಜೆಯಲ್ಲಿ 29 ವರ್ಷದ ರಂಜಿತ್ ಎಂಬ ಯುವಕ ಬೆಡ್ರೂಂನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಟುಂಬಸ್ಥರು ಬೆಳಿಗ್ಗೆ ಸಂಬಂಧಿಕರ ಮನೆಗೆ ತೆರಳಿದ್ದರಿಂದ ರಂಜಿತ್ ಮನೆಯಲ್ಲಿ ಒಬ್ಬನೇ ಇದ್ದನು. ರಾತ್ರಿ 8:30ರ ಸುಮಾರಿಗೆ ಕುಟುಂಬದವರು ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಸ್ಪಂದಿಸದಿದ್ದಾಗ ಬಾಗಿಲು ಮುರಿದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣವೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.
ಮೃತ ಯುವಕ ಚನಿಯಪ್ಪ ನಾಯ್ಕ ಎಂಬವರ ಪುತ್ರನಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

