ರೈಲು ಅಪಘಾತಕ್ಕೆ ವೃದ್ಧ ಬಲಿ : ಪತ್ತೆಯಾಗದ ವಾರಸುದಾರರು : ಮಂಜೇಶ್ವರ ಪೊಲೀಸರಿಂದ ತನಿಖೆ

​ಮಂಜೇಶ್ವರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೇ ಗೇಟ್ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಮೃತರ ಗುರುತು ಇದುವರೆಗೂ ಪತ್ತೆಯಾಗಿಲ್ಲ.

​ಗುರುವಾರ ಸಂಜೆ ವೇಳೆ ರೈಲು ಹಳಿಯ ಪಕ್ಕದ ಪೊದೆಯಲ್ಲಿ ತೀವ್ರವಾಗಿ ಗಾಯಗೊಂಡು ಅಸ್ವಸ್ಥ ಸ್ಥಿತಿಯಲ್ಲಿದ್ದ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ತಕ್ಷಣವೇ ಗಮನಿಸಿ, ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಕಾಸರಗೋಡು-ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಂಜೇಶ್ವರ ಠಾಣಾ ಪೊಲೀಸರು, ವಾರಸುದಾರರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.ಪ್ರಸ್ತುತ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತರ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!